

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ರೈತ ದಸರಾ'ಗೆ ಮಂಗಳವಾರ ಚಾಲನೆ ನೀಡಿದರು.
ಕೃಷಿ ಸಚಿವ ಕೃಷ್ಣ ಭೈರೇಗೌಡ ಗೈರು ಹಿನ್ನೆಲೆಯಲ್ಲಿ ಅವರ ಬದಲಾಗಿ ಸಿದ್ದರಾಮಯ್ಯ ಅವರು ಮೈಸೂರು ತಾಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಹೊಲ ಉಳುವ ಮೂಲಕ ರೈತ ದಸರಾ ಉದ್ಘಾಟಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಹಾಗೂ ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರು ಸಹ ಭಾಗಿಯಾಗಿದ್ದರು.
ಬಳಿಕ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ನಾಡಕುಸ್ತಿ ಪಂದ್ಯಾವಳಿಗೆ ಸಿಎಂ ಚಾಲನೆ ನೀಡಿದರು.