ಮಣಿಪಾಲ್ ವೈದ್ಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್: ಮೂವರಿಗೆ ಜೀವಾವಧಿ ಶಿಕ್ಷೆ

ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ...
ಜೈಲು
ಜೈಲು

ಉಡುಪಿ: ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 1.10 ಲಕ್ಷ ರುಪಾಯಿ ದಂಡ ವಿಧಿಸಿದೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಆರೋಪಿಗಳಾಗಿದ್ದ ಯೋಗೇಶ್‌, ಆನಂದ್‌ ಮತ್ತು ಹರಿಪ್ರಸಾದ್‌ ಅವರಿಗೆ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯನಾಶ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಬಾಲಚಂದ್ರ ಮತ್ತು ಹರೀಂದ್ರ ಅವರಿಗೆ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ ತಲಾ 5 ಸಾವಿರ ರುಪಾಯಿ ದಂಡವನ್ನು ವಿಧಿಸಿದೆ.

2013ರ ಜೂನ್‌ 20ರಂದು ಮಣಿಪಾಲದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮೂವರು ಆರೋಪಿಗಳು ಆಟೋ ರಿಕ್ಷಾದಲ್ಲಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದರು. ಈ ಪ್ರಕರಣ ನಡೆದು ಒಂದು ವಾರದೊಳಗೆ ಮಣಿಪಾಲ ಪೊಲೀಸರು ಪ್ರಕರಣವನ್ನು ಬೇದಿಸಿ ಪ್ರಧಾನ ಮೂವರು ಆರೋಪಿಗಳನ್ನು ಬಂಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com