ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ರೈತರಿಂದ ದಸರಾಗೆ ಚಾಲನೆ: ಸಿಎಂ

ಬರ ಮತ್ತು ಬೆಳೆನಾಶದಂತಹ ಸಮಸ್ಯೆಗಳಿಂದಾಗಿ ಬಳಲುತ್ತಿರುವ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಬಾರಿಯ ದಸರಾಗೆ ಪ್ರಗತಿಪರ ರೈತರಿಂದಲೇ ಚಾಲನೆ ಕೊಡಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...
ಸಿಎಂ ಸಿದ್ದರಾಮಯ್ಯ (ಸಂಗ್ರಹಚಿತ್ರ)
ಸಿಎಂ ಸಿದ್ದರಾಮಯ್ಯ (ಸಂಗ್ರಹಚಿತ್ರ)

ಮೈಸೂರು: ಬರ ಮತ್ತು ಬೆಳೆನಾಶದಂತಹ ಸಮಸ್ಯೆಗಳಿಂದಾಗಿ ಬಳಲುತ್ತಿರುವ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಬಾರಿಯ ದಸರಾಗೆ ಪ್ರಗತಿಪರ ರೈತರಿಂದಲೇ ಚಾಲನೆ  ಕೊಡಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ನಡೆದ ನಂದಿಧ್ವಜ ಪೂಜಾ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ  ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಬರಗಾಲ ಪರಿಸ್ಥಿತಿ ತಲೆದೋರಿದ್ದು, ರೈತರು ಸಂಕಷ್ಟ ಎದುರಿಸುವಂತಾಗಿದೆ. ರೈತರಲ್ಲಿ  ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಬಾರಿ ದಸರಾಕ್ಕೆ ಪ್ರಗತಿಪರ ರೈತರಾದ ಪುಟ್ಟಣ್ಣಯ ಅವರಿಂದ ಚಾಲನೆ ಕೊಡಿಸಲಾಯಿತು ಎಂದು ಹೇಳಿದರು.

"ಮುಂಗಾರು ಕೈ ಕೊಟ್ಟಿದ್ದರೂ ಹಿಂಗಾರು ಬೆಳೆ ಉತ್ತಮವಾಗಿ ಬರುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ರೈತರು ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣವಾಗಲಿ ಎಂದು  ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ ಅವರು, "ರೈತರ ನೆರವಿಗೆ ರಾಜ್ಯ ಸರ್ಕಾರ  ಬದ್ಧ, ಆದರೆ ಕೇಂದ್ರ ಸರ್ಕಾರ ಯಾವ ಪರಿಹಾರವನ್ನು ಬಿಡುಗಡೆ ಮಾಡಲಾಗಿಲ್ಲ. ಅದಾಗ್ಯೂ ರಾಜ್ಯದ ಸಮಗ್ರ ಚಿತ್ರಣವನ್ನು ಗಮನದಲ್ಲಿರಿಸಿಕೊಂಡು ಕೆಲಸ ಮಾಡಲಾಗುತ್ತಿದೆ. ಈಗಾಗಲೇ  ಪರಿಹಾರ ವಿತರಣಾ ಕಾರ್ಯ ಕೈಗೊಂಡಿದ್ದು, ಬಡ್ಡಿ ಮನ್ನಾಕ್ಕೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com