ಮೈಸೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್

ಶುಕ್ರವಾರ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಸಿದ್ಧತೆ ನಡೆದಿರುವಂತೆಯೇ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ...
ಮೈಸೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ (ಸಂಗ್ರಹ ಚಿತ್ರ)
ಮೈಸೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ (ಸಂಗ್ರಹ ಚಿತ್ರ)

ಮೈಸೂರು: ಶುಕ್ರವಾರ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಸಿದ್ಧತೆ ನಡೆದಿರುವಂತೆಯೇ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ವಿಶ್ವವಿಖ್ಯಾತ ಜಂಬೂ ಸವಾರಿ ವೀಕ್ಷಣೆಗಾಗಿ ವಿಶ್ವಾದ್ಯಂತ ಪ್ರವಾಸಿಗರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ನಗರದ  ಪೊಲೀಸರು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಭದ್ರತೆಗಾಗಿ 5, 000 ಪೊಲೀಸರನ್ನು ನಿಯೋಜಿಸಲಾಗಿದ್ದು, 40 ಕೆಎಸ್‌ಆರ್‌ಪಿ ತುಕಡಿ,  40 ಕಮಾಂಡೋ ಪಡೆ, 20 ಶ್ವಾನದಳ, 15 ಅಶ್ವರೋಹಿ ದಳಗಳನ್ನು ನಿಯೋಜಿಸಲಾಗಿದೆ.

ಇದಲ್ಲದೆ ಅರೆಸೇನಾ ಪಡೆ, ಗೃಹರಕ್ಷಕ ದಳವನ್ನು ಭದ್ರತೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಅರಮನೆಯ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ 44 ಕಡೆಗಳಲ್ಲಿ ಸಿಸಿ ಕ್ಯಾಮರಾ  ಅಳವಡಿಸಲಾಗಿದ್ದು, ಪ್ರತಿಯೊದು ಚಲನವಲನಗಳನ್ನು ಅಧಿಕಾರಿಗಳು ವೀಕ್ಷಿಸಲಿದ್ದಾರೆ.

"ವಿಶ್ವವಿಖ್ಯಾತ ಮೈಸೂರು ದಸರಾ ವೀಕ್ಷಣೆಗಾಗಿ ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಜಿಲ್ಲೆಗೆ ಆಗಮಿಸಿದ್ದಾರೆ. ಹೀಗಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ  ತಡೆಯಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸುಮಾರು 5000 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಸಿಎಆರ್  ತುಕಡಿ, ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ" ಎಂದು ಮೈಸೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com