
ಬೆಂಗಳೂರು: ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಗೃಹ ಖಾತೆ ನೀಡುವ ಸಾಧ್ಯತೆ ಇದೆ.
ಡಿಸಿಎಂ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದ ಪರಮೇಶ್ವರ ಅವರು, ಗೃಹ ಖಾತೆ ಅಥವಾ ಬೆಂಗಳೂರು ಅಭಿವೃದ್ಧಿ ಖಾತೆಗೆ ಬೇಡಿಕೆ ಇಟ್ಟಿದ್ದರು. ಇದೀಗ ಗೃಹ ಸಚಿವರಾಗಿರುವ ಕೆ.ಜೆ.ಜಾರ್ಜ್ ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ನೀಡಿ, ಅವರ ಬಳಿ ಇರುವ ಗೃಹ ಖಾತೆಯನ್ನು ಪರಮೇಶ್ವರ ಅವರಿಗೆ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.
ಇನ್ನು ಫೆಬ್ರುವರಿ 2016ರವರೆಗೆ ವಿಧಾನ ಪರಿಷತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಮುಗಿಯುವವರೆಗೆ ಪರಮೇಶ್ವರ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
ಇನ್ನುಳಿದಂತೆ ನೂತನ ಸಚಿವರಾಗಿ ಸಿದ್ದರಾಮಯ್ಯ ಸಂಪುಟ ಸೇರುತ್ತಿರುವ ವಿನಯ್ ಕುಲಕರ್ಣಿ ಅವರಿಗೆ ಅಬಕಾರಿ, ಎ.ಮಂಜು ಅವರಿಗೆ ಪ್ರವಾಸೋದ್ಯಮ ಹಾಗೂ ಮನೋಹರ್ ತಹಶಿಲ್ದಾರ್ ಅವರಿಗೆ ಪೌರಾಡಳಿತ ಖಾತೆ ನೀಡುವ ಸಾಧ್ಯತೆ ಇದೆ.
ಈ ನಾಲ್ವರು ಶಾಸಕರು ಇಂದು ಮಧ್ಯಾಹ್ನ 4.30ಕ್ಕೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Advertisement