ಪ್ರಧಾನಿ ನರೇಂದ್ರ ಮೋದಿ
ಪ್ರಧಾನ ಸುದ್ದಿ
ಕನ್ನಡಿಗರಿಗೆ ರಾಜ್ಯೋತ್ಸವದ ಶುಭ ಕೋರಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದ್ದಾರೆ.
ನವೆಂಬರ್ 1ರಂದು ರಾಜ್ಯ ಸಂಸ್ಥಾಪನಾ ದಿನಾಚರಣೆ ಆಚರಿಸುತ್ತಿರುವ ಕರ್ನಾಟಕ, ಚತ್ತೀಸ್ ಗಢ, ಹರಿಯಾಣ, ಮಧ್ಯಪ್ರದೇಶ ರಾಜ್ಯಗಳಿಗೆ ಪ್ರಧಾನಿ ಮೋದಿ ಟ್ವಿಟರ್ ಮೂಲಕ ಶುಭಕೋರಿದ್ದಾರೆ.
ಕರ್ನಾಟಕ ರಾಜ್ಯ ಪ್ರಗತಿಯ ಉತ್ತುಂಗಕ್ಕೇರಲಿ ಎಂದು ಹೇಳುವ ಮೂಲಕ ಕನ್ನಡಿಗರಿಗೆ ರಾಜ್ಯೋತ್ಸವದ ಶುಭ ಕೋರಿದ್ದಾರೆ. ಇನ್ನು ಚತ್ತೀಸ್ ಗಢದಲ್ಲಿ ಸುಂದರ ಜನತೆ ಹಾಗೂ ಹರಿಯಾಣ ಜೈ ಜವಾನ್ ಜೈ ಕಿಸಾನ್ ಘೋಷಣೆ ಅನುಷ್ಠಾನ ಮಾಡಿಕೊಂಡ ರಾಜ್ಯ ಎಂದು ಮೋದಿ ಅವರು ತಮ್ಮ ಟ್ವೀಟ್ ನಲ್ಲಿ ಶ್ಲಾಘಿಸಿದ್ದಾರೆ.
1956ರಲ್ಲಿ ಕರ್ನಾಟಕ, 1966ರಲ್ಲಿ ಹರಿಯಾಣ, 2000ನೇ ಇಸವಿಯಲ್ಲಿ ಚತ್ತೀಸ್ ಗಢ ವಿಂಗಡನೆಯಾಯಿತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ