ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲಾಗಿದೆ: ಪ್ರಹ್ಲಾದ್ ಜೋಶಿ

ರಾಜ್ಯ ಸರ್ಕಾರ ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಗುರುವಾರ ಆರೋಪಿಸಿದ್ದಾರೆ.
ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಗುರುವಾರ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲಾಗಿದೆ ಎಂದಿದ್ದಾರೆ.

ಹೆಚ್ಚಿನ ದರಕ್ಕೆ ವಿದ್ಯುತ್ ಖರೀದಿಸುವ ಕುರಿತು ಸಂಶಯ ವ್ಯಕ್ತಪಡಿಸಿರುವ ಜೋಶಿ, ವಿದ್ಯುತ್ ಖರೀದಿಯಿಂದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ದೂರವಿಡಬೇಕು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ಮುಂದೆ ನಿಂತು ವಿದ್ಯುತ್ ಖರೀದಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ. ಉಷ್ಣ ವಿದ್ಯುತ್ ಘಟಕಗಳ ಮೂಲಕ ವಿದ್ಯುತ್ ಉತ್ಪಾದಿಸಬಹುದಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ತಿಕ್ಕಾಟದಿಂದ ರಾಜ್ಯಕ್ಕೆ 'ಕತ್ತಲು ಭಾಗ್ಯ' ಕರುಣಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಗಣೇಶೋತ್ಸವ ಟೆಂಟ್‌ಗೆ ವಿದ್ಯುತ್ ಪೂರೈಸಲು ನಿರಾಕರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುವಂತೆ ಗಣೇಶ ಮಂಡಳಿಗಳಿಗೆ ಪ್ರಹ್ಲಾದ್ ಜೋಶಿ ಕರೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com