ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಚುನಾವಣೆ ಕುತೂಹಲಕಾರಿ ಘಟ್ಟ ತಲುಪಿದ್ದು, ಪಾಲಿಕೆ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.
ಬಿಬಿಎಂಪಿ ಪುರಸಭಾಂಗಣದಲ್ಲಿ 198 ನೂತನ ಪಾಲಿಕೆ ಸದಸ್ಯರಿಗೆ ಪ್ರಾದೇಶಿಕ ಆಯುಕ್ತೆ ಎಂ.ವಿ ಜಯಂತಿ ಪ್ರತಿಜ್ಞಾವಿಧಿ ಬೋಧಿಸಿದರು. ಎಲ್ಲಾ ಸದಸ್ಯರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬಿಬಿಎಂಪಿ ಆಯುಕ್ತ ಜಿ. ಕುಮಾರ್ ನಾಯಕ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ. ಶಂಕರ್ ಉಪಸ್ಥಿತರಿದ್ದರು.