
ಬೆಂಗಳೂರು: ಬಿಬಿಎಂಪಿ ಮೇಯರ್ ಆಯ್ಕೆ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಿಬಿಎಂಪಿ ಕಚೇರಿ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರ ಡಿಸಿ ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ಆದೇಶಿಸಿದ್ದಾರೆ.
ಚುನಾವಣೆ ವೇಳೆ ಪಕ್ಷಗಳ ಕಾರ್ಯಕರ್ತರು, ಕಿಡಿಗೇಡಿಗಳು ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವ ವೇಳೆ ಗಲಾಟೆಗಳಾಗುವ ಹಾಗೂ ಸಂಚಾರ ವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ.
ಪಟಾಕಿ ಸಿಡಿಸುವುದು, ಮೆರವಣಿಗೆ, ಐದಕ್ಕಿಂತ ಹೆಚ್ಚು ಜನ ಗುಂಪು ಗೂಡುವುದು. ಪ್ರತಿಭಟನೆಗಳನ್ನು ನಿಷೇಧಿಸಲಾಗಿದ್ದು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Advertisement