ಝಾಬುವ, ಮಧ್ಯಪ್ರದೇಶ: ಮಧ್ಯಪ್ರದೇಶದ ಝಾಬುವ ಜಿಲ್ಲೆಯ ಟೀ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ಶನಿವಾರ ೧೦ ಜನ ಮೃತಪಟ್ಟಿದ್ದಾರೆ. ಅಲ್ಲೇ ಹತ್ತಿರದಲ್ಲಿದ್ದ ಇನ್ನೊಂದು ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿ ೪೦ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೊದಲ ಸ್ಫೋಟದ ನಂತರ ಎರಡು ಅಂತಸ್ತಿನ ಕಟ್ಟಡದಲ್ಲಿ ಮತ್ತೊಂದು ಸ್ಫೋಟ ಆಗಿದ್ದರಿಂದ ಕಟ್ಟಡ ಕುಸಿದುಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಝಾಬುವದಲ್ಲಿ ಈ ಸ್ಫೋಟಗಳು ಸಂಭವಿಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ಸಿಂಗ್ ತಿಳಿಸಿದ್ದಾರೆ. ಅಗ್ನಿ ಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
Advertisement