
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಗರಣದ ಮೊದಲ ಪ್ರಕರಣದ ತನಿಖೆ ಮುಕ್ತಾಯಗೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) ಬುಧವಾರ ಜಾರ್ಜ್‌ಶೀಟ್ ಸಲ್ಲಿಸಿದೆ.
ಲೋಕಾಯುಕ್ತ ಲಂಚ ಪ್ರಕರಣ ಸಂಬಂಧ ಎಂಜಿನಿಯರ್ ಎಂ.ಎನ್.ಕೃಷ್ಣಮೂರ್ತಿ ಅವರು ದಾಖಲಿಸಿದ್ದ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಇಂದು 1550 ಪುಟಗಳ ಚಾರ್ಜ್‌ಶೀಟ್ ಅನ್ನು ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಆದರೆ ಸಮಗ್ರ ತನಿಖೆ ನಡೆಯುತ್ತಿರುವ ಕಾರಣ ಮೊದಲನೇ ಪ್ರಕರಣದಲ್ಲಿ ಇನ್ನಷ್ಟು ಸಾಕ್ಷ್ಯ, ಮಾಹಿತಿ ಸಿಕ್ಕರೆ ಮತ್ತೊಮ್ಮೆ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಲು ಸಹ ಅವಕಾಶ ಇದೆ ಎಂದು ಮೂಲಗಳು ತಿಳಿಸಿವೆ.
ಒಟ್ಟು ಐದು ಆರೋಪಿಗಳ ವಿರುದ್ಧ ಜಾರ್ಜ್‌ಶೀಟ್ ಸಲ್ಲಿಸಲಾಗಿದ್ದು, ಪ್ರಕರಣದಲ್ಲಿ ಲೋಕಾಯುಕ್ತ ಪಿಆರ್‌ಒ ಸೈಯದ್ ರಿಯಾಜ್ ಮೊದಲ ಆರೋಪಿ, ಅಶೋಕ್ ಕುಮಾರ್ ಎರಡನೇ ಆರೋಪಿ ಹಾಗೂ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್‌ನನ್ನು ಮೂರನೇ ಆರೋಪಿಯನ್ನಾಗಿ ಮಾಡಲಾಗಿದೆ.
Advertisement