ಲೋಕಾ ಲಂಚ: 3 ಆರೋಪಿಗಳ ಜಾಮೀನು ಅರ್ಜಿ ವಜಾ

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಶನಿವಾರ ವಜಾಗೊಳಿಸಿದೆ.

ಆರೋಪಿಗಳಾದ ರಾಜಶೇಖರ್, ನರಸಿಂಹರಾವ್ ಹಾಗೂ ಸಾದಿಕ್ ಪಾಷಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿದೆ.

ಕೆಪಿಸಿಸಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಎಂಬುವವರು ಎಸ್‌ಐಟಿಗೆ ನೀಡಿದ್ದ ದೂರಿನ ಆಧಾರದ ಮೇಲೆ ಈ ಮೂವರು ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಸಂಸ್ಥೆಯಲ್ಲಿನ ಲಂಚ ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್ ಅವರೊಂದಿಗೆ ಈ ಮೂವರು ಆರೋಪಿಗಳು ಸಂಬಂಧ ಹೊಂದಿದ್ದು, ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ಹಣ ಪಡೆಯುತ್ತಿದ್ದರು ಎಂಬ ವಿಚಾರವಾಗಿ ಅಧಿಕಾರಿಗಳು ಮಹತ್ವದ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com