ಕೆಎಎಸ್ ಮುಖ್ಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಹಿರಂಗ?

ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಕೆಎಎಸ್ ಮುಖ್ಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಹಿರಂಗವಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಗಲಾಟೆ...
ಕೆಪಿಎಸ್ ಸಿ
ಕೆಪಿಎಸ್ ಸಿ
Updated on

kಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಕೆಎಎಸ್ ಮುಖ್ಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಹಿರಂಗವಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಗಲಾಟೆ ನಡೆಸುತ್ತಿರುವ ಘಟನೆ ಮಾಗಡಿ ರಸ್ತೆಯಲ್ಲಿರುವ ಬಿಬಿಎಂಪಿ ಪ್ರೀ ಯೂನಿವರ್ಸಿಟಿ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಗೆಜೆಟೆಡ್ ಪ್ರೊಬೆಷನರ್ಸ್‌ ಗ್ರೂಪ್ 'ಎ' ಹಾಗೂ ಗ್ರೂಪ್ 'ಬಿ' ಶ್ರೇಣಿಯ 465 ಹುದ್ದೆಗಳ ನೇಮಕಕ್ಕೆ ಸಂಬಂಧಿಸಿ ಸೆಪ್ಟೆಂಬರ್ 18ರಿಂದ ಮುಖ್ಯ ಪರೀಕ್ಷೆ ನಡೆಯುತ್ತಿದ್ದು, ಇಂದು ಪ್ರಬಂಧ ವಿಷಯ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳಿಗೆ ನಾಳೆ ನಡೆಯಬೇಕಿದ್ದ ಸಾಮಾನ್ಯ ಅಧ್ಯಯನ ವಿಷಯದ ಪ್ರಶ್ನೆ ಪತ್ರಿಕೆ ನೀಡಲಾಗಿದೆ. ಕೂಡಲೇ ಎಚ್ಚೆತ್ತುಕೊಂಡ ಮೇಲ್ವಿಚಾರಕರು ಮತ್ತೆ ಪ್ರಬಂಧ ವಿಷಯದ ಪ್ರಶ್ನೆ ಪತ್ರಿಕೆ ನೀಡಿದ್ದಾರೆ. ಆದರೆ ನಾಳಿನ ಪ್ರಶ್ನೆ ಪತ್ರಿಕೆ ಇಂದೇ ಲಭ್ಯವಾಗಿರುವುದರಿಂದ ಪ್ರಶ್ನೆ ಪತ್ರಿಕೆ ಮೊದಲೇ ಬಹಿರಂಗವಾಗಿರುವುದು ಸ್ಪಷ್ಟವಾಗಿದೆ ಎಂದು ಅಭ್ಯರ್ಥಿಗಳು ದೂರಿದ್ದಾರೆ.

ಇನ್ನು ಧಾರವಾಡದ ಕೆಲವು ಪರೀಕ್ಷಾ ಕೇಂದ್ರಗಳಲ್ಲೂ ಇದೆ ಯಡವಟ್ಟಾಗಿದ್ದು, ಸೆ.22ರಂದು ನಡೆಯಬೇಕಿದ್ದ ಸಾರ್ವಜನಿಕ ಆಡಳಿತ ವಿಷಯದ ಪ್ರಶ್ನೆ ಪತ್ರಿಯೆನ್ನು ಇಂದೆ ನೀಡಲಾಗಿದೆ ಎಂದು ಅಭ್ಯರ್ಥಿಗಳು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com