ಪ್ರಧಾನ ಸುದ್ದಿ

ಚುನಾವಣಾ ಪೂರ್ವ ಸಮೀಕ್ಷೆ: ಬಿಹಾರದಲ್ಲಿ ಮೋದಿ ನೇತೃತ್ವದ ಎನ್‌ಡಿಎಗೆ ಬಹುಮತ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಝೀ ಮೀಡಿಯಾ ಗ್ರೂಪ್...

ಚುನಾವಣಾ ಪೂರ್ವ ಸಮೀಕ್ಷೆ: ಬಿಹಾರದಲ್ಲಿ ಮೋದಿ ನೇತೃತ್ವದ ಎನ್‌ಡಿಎಗೆ ಬಹುಮತ
ನರೇಂದ್ರ ಮೋದಿ - ನಿತಿಶ್ ಕುಮಾರ್
Published On :

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಝೀ ಮೀಡಿಯಾ ಗ್ರೂಪ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.

ಸಮೀಕ್ಷೆಯ ಪ್ರಕಾರ, ಬಿಜೆಪಿ ನೇತೃತ್ವದ ಎನ್‌ಡಿಎಗೆ ಶೇ.50.8ರಷ್ಟು ಹಾಗೂ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ನೇತೃತ್ವದ ಮಹಾ ಮೈತ್ರಿಗೆ ಶೇ.42.5ರಷ್ಟು ಮತಗಳು ದೊರೆತರೆ, ಶೇ.6.7ರಷ್ಟು ಮತಗಳನ್ನು ಇತರರು ಪಡೆಯಲಿದ್ದಾರೆ.

ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್‌ಡಿಎ 140 ಸ್ಥಾನಗಳಲ್ಲಿ ಹಾಗೂ ಮಹಾ ಮೈತ್ರಿ 70 ಸ್ಥಾನಗಳಲ್ಲಿ ಗೆಲವು ಸಾಧಿಸಲಿದೆ. ಇನ್ನು 33 ಸ್ಥಾನಗಳಲ್ಲಿ ನೇರ ಹಣಾಹಣಿ ನಡೆಯಲಿದ್ದು, ಯಾರು ಗೆಲ್ಲುತ್ತಾರೆ ಅಂತ ಹೇಳುವುದು ಕಷ್ಟ ಎಂದಿದ್ದಾರೆ ಮತದಾರ.

ಈ ಬಾರಿ ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಶೇ.41.2ರಷ್ಟು ಅಲ್ಪಸಂಖ್ಯಾತ ಮತಗಳನ್ನು ಸೆಳೆಯಲಿದ್ದು, ಮಹಾ ಮೈತ್ರಿ ಶೇ.52.4ರಷ್ಟು ಮತಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.

ಐದು ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಕ್ಟೋಬರ್ 12ರಂದು ಮೊದಲ ಹಂತ ಹಾಗೂ ನವೆಂಬರ್ 5ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ನವೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.