ಮೆಕ್ಕಾದಲ್ಲಿ ಭಾರತೀಯರು ಮೃತಪಟ್ಟ ಬಗ್ಗೆ ಮಾಹಿತಿ ಇಲ್ಲ: ವಿದೇಶಾಂಗ ಸಚಿವಾಲಯ

ಮೆಕ್ಕಾದಲ್ಲಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಭಾರತೀಯರು ಮೃತಪಟ್ಟ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಬಂದಿಲ್ಲ ಎಂದು...
ಮೆಕ್ಕಾದಲ್ಲಿ ಭಾರತೀಯರು ಮೃತಪಟ್ಟ ಬಗ್ಗೆ ಮಾಹಿತಿ ಇಲ್ಲ: ವಿದೇಶಾಂಗ ಸಚಿವಾಲಯ

ನವದೆಹಲಿ: ಮೆಕ್ಕಾದಲ್ಲಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಭಾರತೀಯರು ಮೃತಪಟ್ಟ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಬಂದಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ.

ಘಟನೆ ಸಂಬಂಧ ವಿದೇಶಾಂಗ ಸಚಿವಾಲಯ ಹೆಲ್ಪಲೈನ್ ನಂಬರ್- 009661254580000 ಬಿಡುಗಡೆ ಮಾಡಿದೆ.

ಸೌದಿ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಘಟನೆಯಲ್ಲಿ ಭಾರತೀಯರು ಮೃತಪಟ್ಟಿರುವ ಬಗ್ಗೆ ಇದುವರೆಗೂ ಮಾಹಿತಿ ಲಭ್ಯವಾಗಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು ಟ್ವೀಟ್ ಮಾಡಿದ್ದಾರೆ.

ಸೌದಿ ಅರೇಬಿಯಾದಲ್ಲಿರುವ ಮೆಕ್ಕಾದ ಮಸೀದಿ ಬಳಿ ಪವಿತ್ರ ಹಜ್ ಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿ 310 ಯಾತ್ರಿಕರು ಮೃತಪಟ್ಟಿದ್ದಾರೆ ಮತ್ತು 500ಕ್ಕೂ ಹೆಚ್ಚು ಯಾತ್ರಿಕರು ತೀವ್ರವಾಗಿ ಗಾಯಗೊಂಡಿರುವ ದುರ್ಘಟನೆ ಗುರುವಾರ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com