ಆರ್.ವಿ.ದೇಶಪಾಂಡೆ
ಪ್ರಧಾನ ಸುದ್ದಿ
ಅರಣ್ಯ ಭೂಮಿ ಒತ್ತುವರಿ: ಸಚಿವ ದೇಶಪಾಂಡೆ ವಿರುದ್ಧ ಲೋಕಾಯುಕ್ತಕ್ಕೆ ದೂರು
ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ಅವರು ಜಕ್ಕೂರು ಮತ್ತು ಅಲ್ಲಾಳಸಂದ್ರದಲ್ಲಿ 11 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು...
ಬೆಂಗಳೂರು: ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ಅವರು ಜಕ್ಕೂರು ಮತ್ತು ಅಲ್ಲಾಳಸಂದ್ರದಲ್ಲಿ 11 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿ ಗುರುವಾರ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಸಚಿವ ಆರ್.ವಿ.ದೇಶಪಾಂಡೆ ಅವರು 11 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಮಿತಿ ಅಧ್ಯಕ್ಷ ಗಿರಿ ಗೌಡ ದೇಶಪಾಂಡೆ ಸೇರಿದಂತೆ 50 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.
ಸಚಿವ ದೇಶಪಾಂಡೆ ಅವರು 11 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದು, ಆ ಪೈಕಿ 5 ಎಕರೆ ಪ್ರದೇಶದಲ್ಲಿ ಮನೆ ನಿರ್ಮಿಸಿದ್ದಾರೆ ಎಂದು ಗಿರಿಗೌಡ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಲೋಕಾಯುಕ್ತ ದೂರು ನೀಡಿ, ಕ್ರಮಕೈಗೊಳ್ಳುವಂತೆ ಗಿರಿಗೌಡ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ