ಇನ್ನು ನಿನ್ನೆ ನಡೆದ ಮಹಾದಾಯಿ ವಿವಾದ ಬಗೆಹರಿಸುವ ಸಂಬಂಧ ರಾಜ್ಯ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆ ವಿಫಲವಾಯಿತು. ಸಭೆಯಲ್ಲಿ ಉಭಯ ಸದನಗಳ ಪ್ರತಿಪಕ್ಷಗಳ ನಾಯಕರು, ಕೇಂದ್ರ ಸಚಿವರು, ಸಂಸದರು, ಉತ್ತರ ಕರ್ನಾಟಕದ ಶಾಸಕರು ಮತ್ತು ರೈತ ಮುಖಂಡರ ಸಭೆ ಕರೆಯಲಾಗಿತ್ತು. ಸುಮಾರು ಮೂರು ತಾಸು ನಡೆದ ಸಭೆಯಲ್ಲಿ ಎರಡೂ ಪಕ್ಷಗಳ ನಾಯಕರ ನಡುವೆ ಒಮ್ಮತ ಮೂಡಲಿಲ್ಲ ಎಂದು ಮೂಲಗಳು ತಿಳಿಸಿವೆ.