ವಾಯುವ್ಯ ಪಾಕಿಸ್ತಾನ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮಳೆ-ಪ್ರವಾಹದಿಂದ ೫೭ ಸಾವು

ವಾಯುವ್ಯ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಕನಿಷ್ಠ ೫೭ ಜನ ಮೃತಪಟ್ಟಿದ್ದು, ೨೭ ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಪ್ರವಾಹದ ಒಂದು ದೃಶ್ಯ
ಪಾಕಿಸ್ತಾನದ ಪ್ರವಾಹದ ಒಂದು ದೃಶ್ಯ
Updated on: 

ಇಸ್ಲಾಮಾಬಾದ್: ವಾಯುವ್ಯ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಕನಿಷ್ಠ ೫೭ ಜನ ಮೃತಪಟ್ಟಿದ್ದು, ೨೭ ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಈ ಪ್ರದೇಶಗಳಲ್ಲಿ ಸಂಭವಿಸಿದ ಭಾರಿ ಮಳೆ ಮನೆಗಳನ್ನು ಕೂಡ ಕೊಚ್ಚಿಕೊಂಡು ಹೋಗಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಶಾಂಗ್ಲಾ ಜಿಲ್ಲೆ ಅತಿ ಹೆಚ್ಚು ಹಾನಿಗೊಂಡಿದ್ದು ೧೪ ಜನ ಅಸುನೀಗಿದ್ದಾರೆ. ಕೋಹಿಸ್ತಾನ ಮತ್ತು ಸ್ವಾಟ್ ಪ್ರದೇಶಗಳಲ್ಲಿ ಕ್ರಮವಾಗಿ ೧೨ ಮತ್ತು ೮ ಜನ ಪ್ರಾಣ ಕಳೆದುಕೊಂಡಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಗಿಲ್ಗಿಟ್-ಬಾಲಿಸ್ಥಾನದಲ್ಲಿ ಐದು ಮಕ್ಕಳು ಸೇರಿದಂತೆ ೮ ಜನ ಸಾವನ್ನಪ್ಪಿದ್ದಾರೆ. ಈ ಎಲ್ಲಾ ಮಳೆ ಸುರಿದ ಪ್ರದೇಶಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರಾಣ ಮತ್ತು ಆಸ್ತಿ ಹಾನಿಗೆ ಪಾಕಿಸ್ತಾನ ಪ್ರಧಾನಿ ಮಮ್ನೂನ್ ಹುಸ್ಸೇನ್ ವಿಷಾದ ವ್ಯಕ್ತಪಡಿಸಿದ್ದು, ಹಾನಿಗೊಂಡ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com