ರಾಷ್ಟ್ರಧ್ವಜಕ್ಕೆ ಅವಮಾನ; ಮೋದಿ ವಿರುದ್ಧ ದೂರು

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸ ಕೈಗೊಂಡಾಗ ಮತ್ತು ಅಂತಾರಾಷ್ಟ್ರೀಯ ಯೋಗ ದಿನದಂದು ರಾಷ್ಟ್ರಧ್ವಜಕ್ಕೆ ಅವಮಾನವೆಸಗಿದ್ದಾರೆ...
ನರೇಂದ್ರ ಮೋದಿ
ನರೇಂದ್ರ ಮೋದಿ
Updated on: 
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸ ಕೈಗೊಂಡಾಗ ಮತ್ತು ಅಂತಾರಾಷ್ಟ್ರೀಯ ಯೋಗ ದಿನದಂದು ರಾಷ್ಟ್ರಧ್ವಜಕ್ಕೆ ಅವಮಾನವೆಸಗಿದ್ದಾರೆ ಎಂದು ಆರೋಪಿಸಿ ದೆಹಲಿ ನ್ಯಾಯಲಯದಲ್ಲಿ ದೂರು ಸಲ್ಲಿಸಲಾಗಿದೆ. 
ಆಶಿಶ್ ಶರ್ಮಾ ಎಂಬವರು ಮೋದಿ ವಿರುದ್ಧ ದೂರು ಸಲ್ಲಿಸಿದ್ದು, ಭಾರತದ ರಾಷ್ಟ್ರಧ್ವಜ ಸಂಹಿತೆಯ ರಾಷ್ಟ್ರಧ್ವಜಕ್ಕೆ ಅವಮಾನ ತಡೆ ಕಾಯ್ದೆ 1971ಯನ್ನು ಮೋದಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ದೆಹಲಿ ಗೇಟ್‌ನಲ್ಲಿ ಯೋಗ ದಿನದಂದು ನಡೆದ ಕಾರ್ಯಕ್ರಮದಲ್ಲಿ ಮೋದಿಯವರು ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿದ್ದರು. ಇದು ಮಾತ್ರವಲ್ಲದೆ ಮೋದಿಯವರು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾರಿಗೆ ರಾಷ್ಟ್ರಧ್ವಜದ ಮೇಲೆ ಸಹಿ ಹಾಕಿ ನೀಡಿದ್ದರು. ಈ ಮೂಲಕ ಅವರು ರಾಷ್ಟ್ರೀಯ ಧ್ವಜ ಸಂಹಿತೆ, 2002 ನ್ನು ಉಲ್ಲಂಘಿಸಿದ್ದಾರೆ ಎಂದು ಶರ್ಮಾ ಆರೋಪಿಸಿದ್ದಾರೆ.
ಬುಧವಾರ ದೂರನ್ನು ಆಲಿಸಿದ ಮೆಟ್ರೋಪಾಲಿಟನ್ ನ್ಯಾಯಾಧೀಶರು ಈ ಬಗ್ಗೆ ಮೇ 9ನೇ ತಾರೀಖಿಗೆ ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com