ಪಿಯು ಮೌಲ್ಯಮಾಪನ ಮತ್ತಷ್ಟು ಕಗ್ಗಂಟು, ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಿ: ಉಪನ್ಯಾಸಕರ ಸವಾಲು

ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಒತ್ತಾಯಿಸಿ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ...
ಪ್ರತಿಭಟನಾನಿರತ ಉಪನ್ಯಾಸಕರು
ಪ್ರತಿಭಟನಾನಿರತ ಉಪನ್ಯಾಸಕರು
ಬೆಂಗಳೂರು: ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಒತ್ತಾಯಿಸಿ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಉಪನ್ಯಾಸಕರು ಹೋರಾಟವನ್ನು ಮತ್ತುಷ್ಟು ತೀವ್ರಗೊಳಿಸಿದ್ದು, ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಬೇಡಿಕೆ ಈಡೇರುವವರೆಗೂ ಮುಷ್ಕರ ಹಿಂಪೆಡಯಲ್ಲ ಎಂದಿರುವ ಉಪನ್ಯಾಸಕರು, ಬೇಕಿದ್ರೆ ಸರ್ಕಾರ ಮೌಲ್ಯ ಮಾಪನಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಿ ಎಂದು ನೇರವಾಗಿ ಸವಾಲು ಹಾಕಿದ್ದಾರೆ.
ಉಪನ್ಯಾಸರು ತಮ್ಮ ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಗುರುವಾರ ರಾಜ್ಯ ಸರ್ಕಾರ ಎಸ್ಮಾ ಕಾಯ್ದೆ ಪ್ರಯೋಗಿಸುವ ಬಗ್ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿತ್ತು. ಆದರೆ ಪ್ರತಿಭಟನೆ ನಡೆಸುತ್ತಿರುವ ಪಿಯು ಉಪನ್ಯಾಸಕರು ಯಾವುದೇ ಪರಿಣಾಮ ಎದುರಿಸಲು ಸಿದ್ಧ. ವೇತನ ತಾರತಮ್ಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಯಾಗುವವರೆಗೂ ಮೌಲ್ಯಮಾಪನ ಬಹಿಷ್ಕರಿಸುತ್ತೇವೆ. ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಿ ಎಂದು ಸವಾಲು ಹಾಕಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಕುಮಾರ್ ನಾಯಕ್ ವರದಿ ಜಾರಿಗೆ ಅಗ್ರಹಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಉಪನ್ಯಾಸಕರು ನಡೆಸುತ್ತಿರುವ ಧರಣಿ ಇಂದು 7ನೇ ದಿನಕ್ಕೆ ಕಾಲಿಟ್ಟಿದ್ದು, ಏಪ್ರಿಲ್ 13ರಿಂದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವುದಾಗಿ ಉಪನ್ಯಾಸಕರು ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com