ಮಹಾರಾಷ್ಟ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯ ಲಾತೂರ್ ಗೆ ಸರಕು ಸಾಗಣೆ ರೈಲಿನ 50 ಬೋಗಿಗಳಲ್ಲಿ ನೀರು ಪೂರೈಕೆ ಮಾಡಿತ್ತು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಜ್ರಿವಾಲ್ ಪ್ರಶಂಸಿಸಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಕೇಜ್ರಿವಾಲ್, ಲಾತೂರ್ ನೀರು ಪೂರೈಕೆಗೆ ನಾವು ಪ್ರತಿ ದಿನ 10 ಲಕ್ಷ ಲೀಟರ್ ನೀರು ಪೂರೈಕೆ ಮಾಡಲು ಸಿದ್ಧವಿದ್ದೇವೆ ಎಂದು ತಿಳಿಸಿದ್ದಾರೆ. ನೀರು ರವಾನೆಗೆ ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.