ಪ್ರಧಾನ ಸುದ್ದಿ

ಬಿಎಸ್ ವೈ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಚಿಂತನೆ ಇಲ್ಲ: ಟಿ.ಬಿ. ಜಯಚಂದ್ರ

ಬಿಎಸ್ ವೈ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಚಿಂತನೆ ಇಲ್ಲ: ಟಿ.ಬಿ. ಜಯಚಂದ್ರ
ಟಿ.ಬಿ. ಜಯಚಂದ್ರ
Published On :
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಚಿಂತನೆ ಸರ್ಕಾರ ನಡೆಸಿಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಯಡಿಯೂರಪ್ಪ ಅವರ ವಿರುದ್ಧದ ಕೇಸ್‌ಗಳನ್ನು ರದ್ದು ಮಾಡಿ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಕಾನೂನು ಸಚಿವರು, ಯಡಿಯೂರಪ್ಪ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಯೋಚನೆ ರಾಜ್ಯ ಸರ್ಕಾರದ ಮುಂದಿಲ್ಲ ಎಂದರು.
ಬಿಎಸ್ ವೈ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತಾಗಿ ಖಾಸಗಿ ವ್ಯಕ್ತಿಗಳು ಕಾನೂನು ಇಲಾಖೆ ಸಲಹೆ ಕೇಳಿದ್ದಾರೆ. ಮೇಲ್ಮನವಿ ಸಲ್ಲಿಸಿದರೆ ಸರ್ಕಾರದ ಅಭ್ಯಂತರವೇನು ಇಲ್ಲ ಎಂದು ಜಯಚಂದ್ರ ತಿಳಿಸಿದರು.
ಇನ್ನು ಈ ಬಗ್ಗೆ ಪ್ರತಿಕ್ರಿಸಿಯಿದ ಮಾಜಿ ಸಿಎಂ, ರಾಜ್ಯ ಸರ್ಕಾರ ನಾನು ರಾಜ್ಯಾಧ್ಯಕ್ಷನಾದ ನಂತರ ಜನರಿಂದ ಬಂದ ಪ್ರತಿಕ್ರಿಯೆ ನೋಡಿ ಸೇಡಿನ ರಾಜಕಾರಣ ನಡೆಸುತ್ತಿದೆ ಎಂದು ಬಿಎಸ್ ವೈ ಕಿಡಿ ಕಾರಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.