ಫೆಬ್ರುವರಿ 10ರಿಂದ ಜಾರಿಗೊಳಿಸಲು ಉದ್ದೇಶಿಸಲಾಗಿದ್ದ ನೂತನ ಪಿಎಫ್ ನೀತಿಯನ್ನು ವಿರೋಧದ ಹಿನ್ನೆಲೆಯಲ್ಲಿ ಏಪ್ರಿಲ್ 30ರವರೆಗೆ ಮುಂದೂಡಲಾಗಿತ್ತು. ಈ ನಿರ್ಧಾರದ ವಿರುದ್ಧ ನೌಕರರಿಂದ ‘ಆನ್ಲೈನ್ ಪ್ರಚಾರ ಅಭಿಯಾನ’ ನಡೆದಿತ್ತು. ಸೋಮವಾರ ಹಲವೆಡೆಗಳಲ್ಲಿ ಪ್ರತಿಭಟನಕಾರರ ವಿರುದ್ಧ ಪೊಲೀಸರಿಂದ ಲಾಠಿ ಪ್ರಹಾರವಾಗಿದ್ದರೆ, ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕಾರ್ಮಿಕರ ಪ್ರತಿಭಟನೆ ಉಗ್ರಸ್ವರೂಪಕ್ಕೆ ತಿರುಗಿ 6 ರಾಜ್ಯ ರಸ್ತೆಸಾರಿಗೆ ಬಸ್ಸುಗಳು ಬೆಂಕಿಗೆ ಆಹುತಿಯಾಗಿದ್ದು, ಇತರ ಹಲವು ವಾಹನಗಳು ಹಾನಿಗೊಂಡಿವೆ. ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ, ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರ, ಆಶ್ರುವಾಯು, ಗಾಳಿಯಲ್ಲಿ ಗುಂಡು ಹಾರಾಟವೂ ನಡೆದಿತ್ತು.