ಅಕ್ರಮ ಆಸ್ತಿ ಪ್ರಕರಣ: ಸಚಿವ ಚಿಂಚನಸೂರ್ ವಿರುದ್ಧ ತನಿಖೆಗೆ ಆದೇಶ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪ ಎದಿರಿಸುತ್ತಿರುವ ಜವಳಿ ಸಚಿವ ಬಾಬುರಾವ್ ಚಿಂಚನಸೂರ್ ಅವರ ವಿರುದ್ಧ ತನಿಖೆಗೆ....
ಬಾಬುರಾವ್ ಚಿಂಚನಸೂರ್
ಬಾಬುರಾವ್ ಚಿಂಚನಸೂರ್
ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪ ಎದಿರಿಸುತ್ತಿರುವ ಜವಳಿ ಸಚಿವ ಬಾಬುರಾವ್ ಚಿಂಚನಸೂರ್ ಅವರ ವಿರುದ್ಧ ತನಿಖೆಗೆ ಲೋಕಾಯುಕ್ತ ವಿಶೇಷ ಕೋರ್ಟ್ ಶುಕ್ರವಾರ ಆದೇಶಿಸಿದೆ.
ಯಾದಗಿರಿ ಜಿಲ್ಲೆಯ ಗುರುಮಿಟಕಲ್ ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಬಾಬುರಾವ್ ಚಿಂಚನಸೂರ್ ಅವರು ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎಂದು ವಕೀಲ ಶಾಂತಪ್ಪ ಖಾನಳ್ಳಿ ಅವರು ಲೋಕಾಯುಕ್ತಕ್ಕೆ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಇಂದು ತನಿಖೆಗೆ ಆದೇಶಿಸಿದೆ.
2012ರಲ್ಲಿಯೂ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಕೋರ್ಟ್ ಚಿಂಚನಸೂರ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆದರೆ ಆಗಿನ ಲೋಕಾಯುಕ್ತ ಕೋರ್ಟ್ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com