ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ಉತ್ತರಾಖಂಡ್ ರಾಷ್ಟ್ರಪತಿ ಆಡಳಿತ ವಜಾ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಉತ್ತರಾಖಂಡ್ ದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಶುಕ್ರವಾರ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ನವದೆಹಲಿ: ಉತ್ತರಾಖಂಡ್ ದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಶುಕ್ರವಾರ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಉತ್ತರಾಖಂಡ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನೈನಿತಾಲ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಿದೆ. ಅಲ್ಲದೆ ಹೈಕೋರ್ಟ್ ಆದೇಶದ ಪ್ರತಿಸಲ್ಲಿಸುವಂತೆ ಸೂಚಿಸಿದೆ.
ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಈಗ ಮತ್ತೆ ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ಮತ್ತೆ ಜಾರಿಗೆ ಬಂದಿದೆ.
ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು, ರಾಷ್ಟ್ರಪತಿಗಳ ನಿರ್ಧಾರವನ್ನು ಪ್ರಶ್ನಿಸುವ ಅಧಿಕಾರ ಹೈಕೋರ್ಟ್ ಇಲ್ಲ. ಹೀಗಾಗಿ ಕೂಡಲೇ ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು,
ಉತ್ತರಾಖಂಡ್ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದ ನೈನಿತಾಲ್ ಹೈಕೋರ್ಟ್, ಏಪ್ರಿಲ್ 29ರಂದು ವಿಧಾನಸಭೆಯಲ್ಲಿ ವಿಶ್ವಾಸಮತಯಾಚಿಸುವಂತೆ ನಿರ್ಗಮಿತ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಸೂಚಿಸಿತ್ತು.
ರಾಷ್ಟ್ರಪತಿ ಆಡಳಿತ ಪ್ರಶ್ನಿಸಿ ಹರೀಶ್ ರಾವತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಹಾಗೂ ನ್ಯಾಯಮೂರ್ತಿ ವಿ.ಕೆ.ಬಿಸ್ತ್ ಅವರನ್ನೊಳಗೊಂಡ ನ್ಯಾಯಪೀಠ, ರಾಷ್ಟ್ರಪತಿ ಆಡಳಿತಕ್ಕೆ ಬ್ರೇಕ್ ಹಾಕಿತ್ತು.

Related Stories

No stories found.

Advertisement

X
Kannada Prabha
www.kannadaprabha.com