ಪ್ರಧಾನ ಸುದ್ದಿ

ಸಂಪುಟ ಪುನಾರಚನೆ; ಮೇ ಮೊದಲ ವಾರದಲ್ಲಿ ಹೈಕಮಾಂಡ್ ಭೇಟಿ: ಸಿಎಂ

ಸದ್ಯದಲ್ಲೇ ತಮ್ಮ ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಸಂಪುಟ ಪುನಾರಚನೆ; ಮೇ ಮೊದಲ ವಾರದಲ್ಲಿ ಹೈಕಮಾಂಡ್ ಭೇಟಿ: ಸಿಎಂ
ಜಯದೇವ ಆಸ್ಪತ್ರೆಯ ನೂತನ ಶಾಖೆ ಉದ್ಘಾಟಿಸುತ್ತಿರುವ ಸಿಎಂ
Published On :
ಕಲಬುರಗಿ: ಸದ್ಯದಲ್ಲೇ ತಮ್ಮ ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಇಂದು ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯ ನೂತನ ಶಾಖೆ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಶೀಘ್ರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಮತ್ತು ಈ ಸಂಬಂಧ ಮೇ ಮೊದಲ ವಾರದಲ್ಲಿ ದೆಹಲಿಗೆ ಭೇಟಿ ನೀಡಿ, ಹೈಕಮಾಂಡ್ ನೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಬರಪರಿಶೀಲನೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಕ್ರಿಯೆ ತಡವಾಗುತ್ತಿದೆ ಎಂದು ಸಿಎಂ ಹೇಳಿದ್ದಾರೆ.
ಇದೇ ವೇಳೆ ದಲಿತ ಸಿಎಂ ಕೂಗಿನ ಬಗ್ಗೆ ಪ್ರತಿಕ್ರಿಸಿದ ಸಿದ್ದರಾಮಯ್ಯ, ದಲಿತ ಸಿಎಂ ವಿಷಯ ಕೇವಲ ಗಾಳಿಯಲ್ಲಿ ಚರ್ಚೆಯಾಗುತ್ತಿದೆಯಷ್ಟೇ, ಪಕ್ಷದ ಒಳಗಡೆ ಈ ಬಗ್ಗೆ ಚರ್ಚೆ ಆಗಿಲ್ಲ. ದಲಿತ ಸಿಎಂಗೆ ನಾನೂ ಬೆಂಬಲಿಸುತ್ತೇನೆ ಎಂದರು.
ಇನ್ನು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಡಿಕೆ.ಶಿವಕುಮಾರ್ ಅವರ ಮೇಲೆ ಸುಪ್ರೀಂ ಕೋರ್ಟ್ ನಲ್ಲಿ ಸರ್ಕಾರ ಮೇಲ್ಮನವಿ ಸಲ್ಲಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೇ ಸಚಿವ ಬಾಬುರಾವ್ ಚಿಂಚನಸೂರ ವಿರುದ್ಧ ದಾಖಲಾದ ಲೋಕಾಯುಕ್ತ ಕೇಸ್ ಬಗ್ಗೆಯೂ ವರದಿ ಕೇಳಲಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದಿದ್ದಾರೆ.
ಈ ವೇಳೆ ಸಂಸದ ಮಲ್ಲಿಕಾರ್ಜುನ ಖರ್ಗೆ, ಸಚಿವ ಶರಣಪ್ರಕಾಶ ಪಾಟೀಲ, ಜಯದೇವ ಸಂಸ್ಥೆಯ ನಿರ್ದೇಶಕ ಸಿ.ಎನ್. ಮಂಜುನಾಥ ಹಾಗೂ ಡಾ.ಜಿ.ಪರಮೇಶ್ವರ ಸಹ ಉಪಸ್ಥಿತಿಯಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.