ರಾಘವೇಶ್ವರ ಶ್ರೀಗೆ ಮತ್ತೆ ಸಂಕಟ: ಸೆಷೆನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿಐಡಿ

ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಮತ್ತೆ ಸಂಕಟ ಎದುರಾಗಿದ್ದು, ಶ್ರೀಗೆ ...
ರಾಘವೇಶ್ವರ ಶ್ರೀ
ರಾಘವೇಶ್ವರ ಶ್ರೀ
Updated on
ಬೆಂಗಳೂರು: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಮತ್ತೆ ಸಂಕಟ ಎದುರಾಗಿದ್ದು, ಶ್ರೀಗೆ ಕ್ಲೀನ್ ಚಿಟ್ ನೀಡಿದ್ದ ಬೆಂಗಳೂರು ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಐಡಿ ಗುರುವಾರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.
ರಾಘವೇಶ್ವರ ಶ್ರೀಗಳ ವಿರುದ್ಧ ಸಿಐಡಿ ಪೊಲೀಸರು ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಅಂಗೀಕರಿಸಿದ್ದು, ಈ ಸಂಬಂಧ ನ್ಯಾ. ಎ.ವಿ. ಚಂದ್ರಶೇಖರ ನೇತೃತ್ವದ ಏಕಸದಸ್ಯ ಪೀಠ ಶ್ರೀಗಳಿಗೆ ನೋಟಿಸ್ ಜಾರಿ ಮಾಡಿ, ಬೇಸಿಗೆ ರಜೆಯ ನಂತರ ಅರ್ಜಿ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧ 2014ರ ಮಧ್ಯಭಾಗದಲ್ಲಿ ಗಾಯಕಿ ಪ್ರೇಮಲತಾ ಅತ್ಯಾಚಾರ ಆರೋಪ ಮಾಡಿದ್ದರು. ನಂತರ ನ್ಯಾಯಾಲಯದಲ್ಲಿ ಅನೇಕ ವಾದ-ವಿವಾದಗಳು ನಡೆದಿದ್ದವು. ಸುದೀರ್ಘ ವಿಚಾರಣೆ ಬಳಿಕ ಸೆಷನ್ಸ್ ಕೋರ್ಟ್ ಶ್ರೀಗಳನ್ನು ಆರೋಪಮುಕ್ತಗೊಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com