ಬೆಂಗಳೂರು: ನಕಲಿ ಜಾತಿ ಪ್ರಮಾಣಪತ್ರ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆಪ್ತ ಸಲಹೆಗಾರ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಗೆ ದೂರು ನೀಡಲಾಗಿದೆ.
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ಗುರುವಾರ ಎಸಿಬಿ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದು, ಕೆಂಪಯ್ಯ ಅವರು ನಕಲಿ ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಕ್ಕೆವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮೂಲತಃ ಕುರುಬ ಜನಾಂಗಕ್ಕೆ ಸೇರಿದವರಾದ ಕೆಂಪಯ್ಯ ಕಾಡು ಕುರುಬ ಎಂದು ನೋಂದಾಯಿಸಿ ಎಸ್‌ಟಿ ಪ್ರಮಾಣಪತ್ರ ಸಲ್ಲಿಸಿ ವಂಚಿಸಿದ್ದಾರೆ ಎಂದು ದಿನೇಶ್ ದೂರಿದ್ದಾರೆ.