ನವದೆಹಲಿ: ದೇಶಾದ್ಯಂತ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ಏಕೈಕ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ಎನ್ಇಇಟಿ) ನಡೆಸಲು ಸುಪ್ರೀಂಕೋರ್ಟ್ ಗುರುವಾರ ಒಪ್ಪಿಗೆ ನೀಡಿದ್ದು, ಎಂಬಿಬಿಎಸ್, ಬಿಡಿಎಸ್ ಮತ್ತು ಸ್ನಾತಕೋತ್ತರ (ಪಿಜಿ) ಕೋರ್ಸ್ಗಳಿಗೆ ಎನ್ ಇಇಟಿ ಮೂಲಕ ಎರಡು ಹಂತಗಳಲ್ಲಿ ಪ್ರವೇಶ ಪರೀಕ್ಷೆ ನಡೆಸುವಂತೆ ಕೇಂದ್ರ ಮತ್ತು ಸಿಬಿಎಸ್ಗೆ ಸೂಚಿಸಿದೆ.