ರಾಜ್ಯಸಭೆಯಲ್ಲಿ ಜಿಎಸ್ ಟಿ ಮಸೂದೆ ಅಂಗೀಕಾರ

ರಾಜ್ಯಸಭೆಯಲ್ಲಿ ಸತತ 7 ಗಂಟೆಗಳ ಚರ್ಚೆ ನಂತರ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಎಸ್ ಟಿ ಮಸೂದೆ ಅಂಗೀಕಾರಗೊಂಡಿದೆ.
ರಾಜ್ಯಸಭೆಯಲ್ಲಿ ಜಿಎಸ್ ಟಿ ಮಸೂದೆ ಅಂಗೀಕಾರ
ರಾಜ್ಯಸಭೆಯಲ್ಲಿ ಜಿಎಸ್ ಟಿ ಮಸೂದೆ ಅಂಗೀಕಾರ
Updated on: 

ನವದೆಹಲಿ: ರಾಜ್ಯಸಭೆಯಲ್ಲಿ ಸತತ 7 ಗಂಟೆಗಳ ಚರ್ಚೆ ನಂತರ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಎಸ್ ಟಿ ಮಸೂದೆ ಅಂಗೀಕಾರಗೊಂಡಿದೆ.

ಮಸೂದೆ ಬಗ್ಗೆ ಅರುಣ್ ಜೇಟ್ಲಿ ನೀಡಿದ ಉತ್ತರಕ್ಕೆ ತೃಪ್ತರಾಗದೆ ಎಐಎಡಿಎಂಕೆ ಸದಸ್ಯರು ಸಭಾತ್ಯಾಗ ಮಾಡಿ ವಿರೋಧ ವ್ಯಕ್ತಪಡಿಸಿದರೆ, ಮಸೂದೆಯಲ್ಲಿ ತಾನು ಸೂಚಿಸಿದ್ದ ಕೆಲವೊಂದು ಅಂಶಗಳನ್ನು ಅಳವಡಿಸಲು ಮತ್ತೆ ಕೆಲವು ಅಂಶಗಳಿಗೆ ತಿದ್ದುಪಡಿ  ತರಲು ಕೇಂದ್ರ ಸರ್ಕಾರ ಒಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸಹ ರಾಜ್ಯಸಭೆಯಲ್ಲಿ ಜಿಎಸ್ ಟಿ ಮಸೂದೆ ಅಂಗೀಕಾರಕ್ಕೆ ಬೆಂಬಲಿಸಿದ್ದು ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗಿದೆ.

ರಾಜ್ಯಸಭೆಯಲ್ಲಿ ಮಸೂದೆ ಮಂಡನೆ ಮಾಡಿ ಮಾತನಾಡಿದ್ದ ಅರುಣ್ ಜೇಟ್ಲಿ, ಜಿಎಸ್ ಟಿ ಮಸೂದೆಯನ್ನು  ಒಕ್ಕೂಟ ವ್ಯವಸ್ಥೆಗೆ ಅತ್ಯುತ್ತಮ ಉದಾಹರಣೆಯಾಗಿದ್ದು, ಆದಾಯ ಹೆಚ್ಚಿಸುತ್ತದೆ ಎಂದು ಹೇಳಿದ್ದರು, ರಾಜಕೀಯ ಪಕ್ಷಗಳ ನಡುವಿನ ಮಾತುಕತೆಯ ಪರಿಣಾಮವಾಗಿ ಜಿಎಸ್ ಟಿ ಮಸೂದೆ ಬಗ್ಗೆ ಒಮ್ಮತ ಮೂಡುವುದು ಸಾಧ್ಯವಾಗಿದ್ದು, ಜಿಎಸ್ ಟಿ ಮಸೂದೆ ಅಂಗೀಕಾರ ಸಾಧ್ಯವಾಗಿದ್ದು, ರಾಜ್ಯಸಭೆಯಲ್ಲಿ ಅವಿರೋಧವಾಗಿ ಕೇಂದ್ರ ಸರ್ಕಾರದ ಮಸೂದೆ ಅಂಗೀಕಾರವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com