ಲಾಟರಿ ಹಗರಣ: ಸಿಬಿಐನಿಂದ ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಡಿಜಿಪಿ ಓಂ ಪ್ರಕಾಶ್ ವಿಚಾರಣೆ

ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಸಲಹೆಗಾರ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಮತ್ತು...
ಕೆಂಪಯ್ಯ, ಓಂ ಪ್ರಕಾಶ್
ಕೆಂಪಯ್ಯ, ಓಂ ಪ್ರಕಾಶ್
ನವದೆಹಲಿ: ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಸಲಹೆಗಾರ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಸಿಬಿಐ ದೆಹಲಿಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದೆ.
ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಕೆಂಪಯ್ಯ ಮತ್ತು ಓಂ ಪ್ರಕಾಶ್ ಅವರಿಗೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿದ್ದು, ಸಿಬಿಐ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ರಾಜ್ಯದಲ್ಲಿನ ಒಂದಂಕಿ ಲಾಟರಿ ಹಗರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿದ ನಂತರ ಸುಮಾರು 35ಕ್ಕೂ ಹೆಚ್ಚು ಹಿರಿಯ ಪೊಲೀಸ್ ಅಧಿಕಾರಿಗಳ ವಿಚಾರಣೆಯನ್ನು ಸಿಬಿಐ ನಡೆಸಿತ್ತು. ಈಗ ಕೆಂಪಯ್ಯ ಹಾಗೂ ಓಂಪ್ರಕಾಶ್ ಅವರನ್ನು ವಿಚಾರಣೆಗೆ ಒಳಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com