ಪ್ರಧಾನ ಸುದ್ದಿ

475 ಸಣ್ಣ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು 548 ಕೋಟಿ ಕೇಳಿದ ಕರ್ನಾಟಕ

ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ 475 ಸಣ್ಣ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 548 ಕೋಟಿ ರುಪಾಯಿ ಬಿಡುಗಡೆ ಮಾಡುವಂತೆ...

475 ಸಣ್ಣ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು 548 ಕೋಟಿ ಕೇಳಿದ ಕರ್ನಾಟಕ
ಟಿ.ಬಿ.ಜಯಚಂದ್ರ
Published On :
ನವದೆಹಲಿ: ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ 475 ಸಣ್ಣ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 548 ಕೋಟಿ ರುಪಾಯಿ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಈ ಯೋಜನೆಗಳು ಪೂರ್ಣಗೊಂಡರೆ ಹೊಸದಾಗಿ 33,368 ಹೆಕ್ಟೇರ್ ಪ್ರದೇಶಕ್ಕೆ ನೀರು ದೊರೆಯಲಿದೆ ಮತ್ತು ಅಂತರಜಲದ ಪ್ರಮಾಣ ಸಹ ಹೆಚ್ಚಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಭಾರಿ ಮತ್ತು ಮಧ್ಯಮ ನೀರಾವರಿ ಯೋಜನೆಗಳಿಗೆ ಸಾಲ ಸೌಲಭ್ಯ ಒದಗಿಸುವುದಕ್ಕಾಗಿ ಕೇಂದ್ರ ಸರ್ಕಾರ 1996-97ರಲ್ಲಿ ಎಐಬಿಪಿ (ತ್ವರಿತ ನಿರಾವರಿ ಫಲಾನುಭವಿಗಳ ಯೋಜನೆ) ಯೋಜನೆಯನ್ನು ಆರಂಭಿಸಿದ್ದು. ನಂತರ ಸಣ್ಣ ನೀರಾವರಿಗೂ ಸಾಲ ಸೌಲಭ್ಯ ವಿಸ್ತರಿಸಿತ್ತು. ಆದರೆ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ ಎಐಬಿಪಿ ಯೋಜನೆಯನ್ನು ವಿಲೀನಗೊಳಿಸಿದೆ. 
ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ ರಾಜ್ಯ ಸರ್ಕಾರದ ಸಣ್ಣ ನೀರಾವರಿ ಇಲಾಖೆ 547.64 ಕೋಟಿ ರುಪಾಯಿ ವೆಚ್ಚದಲ್ಲಿ ಅಣೆಕಟ್ಟು ಸೇರಿದಂತೆ ಸುಮಾರು 475 ಕಾಮಗಾರಿಗಳನ್ನು ಗುರುತಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಟಿ.ಬಿ.ಜಯಚಂದ್ರ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.