ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗಕ್ಕೆ ಕಾಶ್ಮೀರದ ಬಗ್ಗೆ ಸರಿಯಾದ ಚಿತ್ರಣ ನೀಡುತ್ತಿದ್ದೇವೆ: ಭಾರತ ಸರ್ಕಾರ

ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗದ ಹೈಕಮಿಷನರ್ ನೊಂದಿಗೆ ಭಾರತ ಸಕಾರಾತ್ಮಕವಾಗಿದ್ದು, ಜಮ್ಮು-ಕಾಶ್ಮೀರದ ಬಗ್ಗೆ ಸರಿಯಾದ ಚಿತ್ರಣವನ್ನು ನೀಡಲಾಗುತ್ತಿದೆ...
ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗ
ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗ

ನವದೆಹಲಿ: ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗದ ಹೈಕಮಿಷನರ್ ನೊಂದಿಗೆ ಭಾರತ ಸಕಾರಾತ್ಮಕವಾಗಿದ್ದು, ಜಮ್ಮು-ಕಾಶ್ಮೀರದ ಬಗ್ಗೆ ಸರಿಯಾದ ಚಿತ್ರಣವನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ, ಪಾಕ್ ಆಕ್ರಮಿತ ಕಾಶ್ಮೀರದ ಪ್ರದೇಶಗಳಲ್ಲಿ ಮಾನವ ಹಕ್ಕು ಸ್ಥಿತಿಯನ್ನು ಪರಿಶೀಲನೆ ನಡೆಸುವ ವಿಚಾರವಾಗಿ ಭಾರತ ಮತ್ತು ಪಾಕಿಸ್ತಾನ ಭೇಟಿಗಾಗಿ ವಿಶ್ವಸಂಸ್ಥೆಯ ಮಾನವಹಕ್ಕು ಆಯೋಗದ ಹೈಕಮಿಷನರ್ ಕಚೇರಿಯಿಂದ ಮನವಿ ಬಂದಿದ್ದು ಹೈಕಮಿಷನರ್ ಅವರೊಂದಿಗೆ ಭಾರತ ಸಕಾರಾತ್ಮಕವಾಗಿ ನಡೆದುಕೊಳ್ಳುತ್ತಿದ್ದು, ಕಾಶ್ಮೀರ ವಿಚಾರವಾಗಿ ಸರಿಯಾದ ಚಿತ್ರಣವನ್ನೇ ನೀಡಲಾಗುತ್ತಿದೆ. ಅಷ್ಟೇ ಅಲ್ಲದೇ ಗಡಿಯಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಬಗ್ಗೆ ಸಹ ಮಾಹಿತಿ ನೀಡಲಾಗುತ್ತಿದೆ ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಮಾಹಿತಿ ನೀಡಿದ್ದಾರೆ. ಉಗ್ರ ಬುರ್ಹಾನ್ ವನಿಯ ಹತ್ಯೆಯನ್ನು ಖಂಡಿಸಿ ನಡೆದಿದ್ದ ಗಲಭೆಯಲ್ಲಿ ಈ ವರೆಗೂ 66 ಜನರು ಮೃತಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com