
ನವದೆಹಲಿ: ರಕ್ಷಾ ಬಂಧನವಾದ ಗುರುವಾರದಂದು ಬಲೋಚಿಸ್ತಾನದ ಬಲೋಚ್ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಕರಿಮಾ ಬಲೋಚ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ತಿಳಿಸಿ, ನಿಮ್ಮನ್ನು ನಮ್ಮ ಸಹೋದರ ಎಂದು ಭಾವಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಬಲೋಚಿಸ್ತಾನದಲ್ಲಿ ನಡೆಯುತ್ತಿರುವ ನರಮೇಧ, ಯುದ್ದಪರಾಧ, ಮಾನವ ಹಕ್ಕುಗಳ ಉಲ್ಲಂಘನೆಯಂತಹ ಅಪರಾಧಗಳ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ದನಿಯೆತ್ತಬೆಕು ಎಂದು ಟ್ವೀಟ್ ಮಾಡಿದ್ದಾರೆ.
ರಕ್ಷ ಬಂಧನವಾದ ಈ ದಿನದಂದು ನಿಮ್ಮನ್ನು ನನ್ನ ಸಹೋದರ ಎಂದು ಭಾವಿಸಿ ಈ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡುತ್ತಿದ್ದೇನೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಲ್ಲಿನ ಸಮಸ್ಯೆಗಳ ಬಗ್ಗೆ ದನಿಯೆತ್ತಿ, ಇಲ್ಲಿಂದ ಕಾಣೆಯಾಗಿರುವ ಸಹೋದರ ಹಾಗೂ ಸಹೋದರಿಯರನ್ನು ಪತ್ತೆ ಹಚ್ಚಲು ಸಹಾಯ ಮಾಡಬೇಕೆಂದು ವಿಡಿಯೋದಲ್ಲಿ ಹೇಳಿದ್ದಾರೆ.
ಆಗಸ್ಟ್ 15ರ ಸ್ವತಂತ್ರ್ಯ ದಿನಾಚರಣೆ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಬಲೋಚಿಸ್ತಾನ ಸ್ವಾತಂತ್ರ್ಯಕ್ಕೆ ತಮ್ಮ ಬೆಂಬಲ ನೀಡುವುದಾಗಿ ಘೋಷಿಸಿದ್ದರು.
Advertisement