ಸಾಕ್ಷಿ ಮಲಿಕ್ ವಿರುದ್ಧ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಹೇಳಿಕೆ; ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲು

ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕುಸ್ತಿ ಪಟು ಸಾಕ್ಷಿ ಮಲಿಕ್ ವಿರುದ್ಧ ಸಾಮಾಜಿಕ ಅಂತರ್ಜಾಲದಲ್ಲಿ ಆಕ್ಷೇಪಾರ್ಹ ಪ್ರತಿಕ್ರಿಯೆಗಳನ್ನು ಬರೆದಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಐಟಿ ಕಾಯ್ದೆಯಡಿ ಪ್ರಕರಣ
ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕುಸ್ತಿ ಪಟು ಸಾಕ್ಷಿ ಮಲಿಕ್
ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕುಸ್ತಿ ಪಟು ಸಾಕ್ಷಿ ಮಲಿಕ್
ಮೀರತ್: ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕುಸ್ತಿ ಪಟು ಸಾಕ್ಷಿ ಮಲಿಕ್ ವಿರುದ್ಧ ಸಾಮಾಜಿಕ ಅಂತರ್ಜಾಲದಲ್ಲಿ ಆಕ್ಷೇಪಾರ್ಹ ಪ್ರತಿಕ್ರಿಯೆಗಳನ್ನು ಬರೆದಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಕೊಳ್ಳಲಾಗಿದೆ ಎಂದು ಪೊಲೀಸರು ಇಂದು ಹೇಳಿದ್ದಾರೆ. 
ಒಲಂಪಿಕ್ಸ್ ಕಂಚಿನ ಪದಕ ವಿಜೇತೆ ಮತ್ತು ಅವರ ಮತಧರ್ಮದ ವಿರುದ್ಧ ನದೀಮ್ ನಂಬಾರ್ಡರ್ ಎಂಬುವವರು ಆಕ್ಷೇಪಣೀಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. 
ಪ್ರಾದೇಶಿಕ ಸಮಾಜ ಸಂಘವೊಂದು ನೀಡಿದ ದೂರಿನ ಮೇಲೆ ಅವರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸೈಬರ್ ಸೆಲ್ ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದೆ. ಆರೋಪಿ ಸದ್ಯಕ್ಕೆ ತಲೆಮರೆಸಿಕೊಂಡಿದ್ದು, ಅವನ ಇರುವಿಕೆಯ ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. 
ನಂಬಾರ್ಡರ್ ತನ್ನ ಫೇಸ್ಬುಕ್ ಖಾತೆಯಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನೆ. ಆದರೆ ಸಮಾಜವಾದಿ ಜಿಲ್ಲಾ ಘಟಕದ ಅಧ್ಯಕ್ಷ ಜೈವೀರ್ ಸಿಂಗ್ ಪ್ರಕಾರ ತಮ್ಮ ಪಕ್ಷಕ್ಕೆ ಆರೋಪಿಯ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com