ವಿಜಯ್ ಮಲ್ಯ ಉದ್ದೇಶಪೂರ್ವಕವಾಗಿಯೇ ಆಸ್ತಿ ವಿವರ ಬಹಿರಂಗಪಡಿಸುತ್ತಿಲ್ಲ: ಸುಪ್ರೀಂಗೆ ಬ್ಯಾಂಕ್ ಗಳು

ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾಲ ಪಡೆದು ಮರುಪಾವತಿ ಮಾಡದೇ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್...
ವಿಜಯ್ ಮಲ್ಯ
ವಿಜಯ್ ಮಲ್ಯ
ನವದೆಹಲಿ: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾಲ ಪಡೆದು ಮರುಪಾವತಿ ಮಾಡದೇ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು ಉದ್ದೇಶಪೂರ್ವಕವಾಗಿಯೇ ತಮ್ಮ ಸಂಪೂರ್ಣ ಆಸ್ತಿಯ ವಿವರಗಳನ್ನು ಸಲ್ಲಿಸುತ್ತಿಲ್ಲ ಎಂದು ಸಿಬಿಐ ಸೇರಿದಂತೆ ವಿವಿಧ ಬ್ಯಾಂಕ್ ಗಳು ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿವೆ.
ಬ್ಯಾಂಕ್ ಗಳ ಪರವಾಗಿ ವಾದ ಮಂಡಿಸಿದ ಅಟರ್ನಿ ಜನರಲ್ ಮುಕುಲ್ ರೊಹಟ್ಗಿ ಅವರು, ವಿಜಯ್ ಮಲ್ಯ ಅವರು ಕಳೆದ ಫೆಬ್ರುವರಿಯಲ್ಲಿ ಬ್ರಿಟಿಷ್ ಸಂಸ್ಥೆಯೊಂದರಿಂದ ಸ್ವೀಕರಿಸಿದ 40 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಯಾವುದೇ ಸಂಪೂರ್ಣ ಆಸ್ತಿಯ ವಿವಿರ ಬಹಿರಂಗಪಡಿಸುತ್ತಿಲ್ಲ ಎಂದು ವಾದಿಸಿದರು.
ಸುಪ್ರೀಂ ಕೋರ್ಟ್ ನಿಯಮಗಳ ಪ್ರಕಾರ, ನೋಟಿಸ್ ನೀಡಿದ ಮೇಲೆ ವಿಜಯ ಮಲ್ಯ ಅವರು ವಿಚಾರಣೆಗೆ ಹಾಜರಾಗಬೇಕು. ಆದರೆ ಅವರು ಇದುವರೆಗೂ ವಿಚಾರಣೆಗೆ ಬಂದಿಲ್ಲ. ಹೀಗಾಗಿ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದರು.
ಇನ್ನು ಮಲ್ಯ ಪರವಾಗಿ ವಾದಿಸಿದ ಹಿರಿಯ ವಕೀಲ ಸಿ.ಎಸ್.ವೈದ್ಯನಾಥನ್ ಅವರು, ಈ ಹಿಂದಿನ ಸುಪ್ರೀಂ ಕೋರ್ಟ್ ಆದೇಶವನ್ನು ಮರು ಪರಿಶೀಲಿಸುವಂತೆ ನಮ್ಮ ಕಕ್ಷಿದಾರರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅದು ನ್ಯಾಯಾಂಗ ನಿಂದನೇ ಆಗುವುದಿಲ್ಲ ಎಂದು ವಾದಿಸಿದರು.
ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಹಾಗೂ ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ನೇತೃತ್ವದ ಪೀಠ, ಆದೇಶ ಮರುಪರಿಶೀಲನೆ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com