ಕಲಬುರ್ಗಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠ ಬುಧವಾರ ಹ್ಯಾಂಡ್ ಸಮನ್ಸ್ ಜಾರಿ ಮಾಡಿದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶರಣಪ್ರಕಾಶ್ ಪಾಟೀಲ್ ಅವರಿಗೆ ಮೂರು ಬಾರಿ ನೋಟಿಸ್ ನೀಡಿತ್ತು. ಆದರೆ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ಇಂದು 5 ದಿನಗಳಲ್ಲಿ ಖುದ್ದು ಹಾಜರಾಗಬೇಕು ಎಂದು ಸಮನ್ಸ್ ಜಾರಿ ಮಾಡಿದೆ.
ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಸಚಿವರು ಹೈದರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದರು. ಅಲ್ಲದೆ ಈ ಪ್ರದೇಶವನ್ನು ಅಭಿವೃದ್ಧಿ ಮಾಡುವುದಾಗಿ ಹೇಳಿಕೆ ನೀಡಿದ್ದರು.
ಈ ಸಂಬಂಧ ಚಿತ್ತಾಪುರದ ನಿವಾಸಿ ಅಬ್ದುಲ್ ರಬ್ ಅವರು ಸಚಿವರ ವಿರುದ್ಧ ದೂರು ದಾಖಲಿಸಿದ್ದರು.