ನಮ್ಮದು ಅಖಂಡ ಕರ್ನಾಟಕ: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿದ್ದರಾಮಯ್ಯ

ಕನ್ನಡ ಸಾಹಿತ್ಯ ಪರಿಷತ್ ಸಾರಥ್ಯದಲ್ಲಿ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಾಯಚೂರಿನಲ್ಲಿ ನಡೆಯುತ್ತಿದ್ದು ಸಾಹಿತ್ಯ ಸಮ್ಮೇಳನ ಕನ್ನಡಿಗರೆಲ್ಲರೂ...
ಸಿದ್ದರಾಮಯ್ಯ
ಸಿದ್ದರಾಮಯ್ಯ

ರಾಯಚೂರು: ಕನ್ನಡ ಸಾಹಿತ್ಯ ಪರಿಷತ್ ಸಾರಥ್ಯದಲ್ಲಿ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಾಯಚೂರಿನಲ್ಲಿ ನಡೆಯುತ್ತಿದ್ದು ಸಾಹಿತ್ಯ ಸಮ್ಮೇಳನ ಕನ್ನಡಿಗರೆಲ್ಲರೂ ಅಭಿಮಾನ ಮತ್ತು ಹೆಮ್ಮೆ ಪಡುವ ಸಂಗತಿ. ನಮ್ಮಲ್ಲಿರುವುದು ಒಂದೇ ಕರ್ನಾಟಕ ಅದುವೇ ಅಖಂಡ ಕರ್ನಾಟಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯನವರು 1934ರಲ್ಲಿ ಮೊದಲ ಬಾರಿಗೆ ಪಂಜೆ ಮಂಗೇಶರಾಯರ ಅಧ್ಯಕ್ಷತೆಯಲ್ಲಿ ಮತ್ತು ನಂತರ 1956ರಲ್ಲಿ ಶ್ರೀರಂಗರ ಅಧ್ಯಕ್ಷತೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿದ್ದವು. ಈಗ ಬಂಡಾಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ 82ನೇ ಸಮ್ಮೇಳನ ನಡೆಯುತ್ತಿದೆ ಎಂದರು.

ಹೈದರಾಬಾದ್ ಕರ್ನಾಟಕವನ್ನು ಕನ್ನಡದ ಕಾಶಿ ಎಂದೂ ಕರೆಯುತ್ತಾರೆ. ವೈಚಾರಿಕ ಕಾಂತ್ರಿಗೆ ನಾಂದಿ ಹಾಡಿದ ವಚನ ಪರಂಪರೆ, ಅನುಭವದ ದರ್ಶನ ಮಾಡಿಸಿದ ದಾಸ ಪರಂಪರೆ ಹಾಗೂ ಜಾನಪದ ವಿವೇಕದ ತತ್ವ ಪದಗಳು ಹುಟ್ಟಿದ್ದು ಈ ಭಾಗದಲ್ಲೇ ಎಂದರು.

ಕನ್ನಡ ಸಂಸ್ಕೃತಿ ಮತ್ತು ಸಾಹಿತ್ಯದ ಹೃದಯ ಭಾಗದಂತಿರುವ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಕೇಂದ್ರ ಸ್ಥಾನ ರಾಯಚೂರಿನಲ್ಲಿ ಸಮ್ಮೇಳನ ನಡೆಯುತ್ತಿರುವುದು ಐತಿಹಾಸಿಕವಾಗಿಯೂ ಮಹತ್ವದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com