ಅನಂತನಾಗ್ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಈ ಎನ್ಕೌಂಟರ್ ನಡೆದಿದೆ. ಅನಂತನಾಗ್ ಜಿಲ್ಲೆಯ ಶ್ರೀಗುಫ್ವರದಲ್ಲಿ ಬೆಳಗ್ಗೆ ಸೇನೆಯ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಸೇನೆ ಪ್ರತಿಕ್ರಯಿಸಿದ್ದರಿಂದ, ಬಸಿತ್ ಅಹ್ಮದ್ ದರ್ ಎಂದು ಗುರುತಿಸಲಾಗಿರುವ ಭಯೋತ್ಪಾದಕ ಹತ್ಯೆಯಾಗಿದ್ದಾನೆ.