ಕರುಣಾನಿಧಿ ಅವರು ಆಸ್ಪತ್ರೆಗೆ ಮರುದಾಖಲಾಗಿರುವ ಕುರಿತಂತೆ ಆಸ್ಪತ್ರೆಯ ವೈದ್ಯರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕರುಣಾ ನಿಧಿಯವರಿಗೆ ಶ್ವಾಸಕೋಶ ಸೋಂಕು ಎದುರಾಗಿದ್ದು, ಪರಿಣಾಮ ಉಸಿರಾಟಕ್ಕೆ ಸಮಸ್ಯೆಯುಂಟಾಗಿದೆ. ಹೀಗಾಗಿ ಆಸ್ಪತ್ರೆಗೆ ಮರುದಾಖಲಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.