ಖಾಸಗಿ ವಲಯದಲ್ಲೂ ಮೀಸಲಾತಿ ಕಲ್ಪಿಸುವ ಅಗತ್ಯ ಇದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಕಲ್ಪಿಸಲು ಬದ್ಧವಾಗಿದೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಅಭಿವೃದ್ಧಿ ಹೊಂದಲು...
ಸಮ್ಮೇಳನ ಉದ್ಘಾಟಿಸುತ್ತಿರುವ ಉಪ ರಾಷ್ಟ್ರಪತಿ ಹಮಿದ್ ಅನ್ಸಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯಿ ವಾಲಾ
ಸಮ್ಮೇಳನ ಉದ್ಘಾಟಿಸುತ್ತಿರುವ ಉಪ ರಾಷ್ಟ್ರಪತಿ ಹಮಿದ್ ಅನ್ಸಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯಿ ವಾಲಾ
ಬೆಂಗಳೂರು: ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಕಲ್ಪಿಸಲು ಬದ್ಧವಾಗಿದೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಅಭಿವೃದ್ಧಿ ಹೊಂದಲು ಖಾಸಗಿ ವಲಯದಲ್ಲೂ ಹಿಂದೂಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಅಗತ್ಯ ಇದೆ ಎಂದು ಮಂಗಳಾವರ ಹೇಳಿದ್ದಾರೆ.
ಇಂದು ನಗರದಲ್ಲಿ ಭಾರತೀಯ ವಕೀಲರ ಸಂಘ ಹಮ್ಮಿಕೊಂಡಿದ ಸಂವಿಧಾನ, ಸುಪ್ರೀಂ ಕೋರ್ಟ್ ಮತ್ತು ಸಾಮಾಜಿಕ ನ್ಯಾಯ ಕುರಿತ 9ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಸಿಎಂ, ಜಾತೀಯತೆ ಹಾಗೂ ಅಸ್ಪೃಶ್ಯತೆ ಸಮಾಜದಲ್ಲಿ ಇನ್ನೂ ಜೀವಂತವಾಗಿದೆ. ಹೀಗಾಗಿ ಸಮಾಜ ಅಭಿವೃದ್ದಿ ಹೊಂದಲು ಸಾಧ್ಯವಾಗುತ್ತಿಲ್ಲ. ಆದರೆ ಶಿಕ್ಷಣ, ಉದ್ಯೋಗ, ವಸತಿ, ಅಧಿಕಾರ ಎಲ್ಲರಿಗೂ ಸಿಕ್ಕಾಗ ಮಾತ್ರ ಸಮಾನ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಇದೇ ವೇಳೆ ಖಾಸಗಿ ವಲಯದಲ್ಲೂ ಮೀಸಲಾತಿಯ ಅಗತ್ಯವಿದೆ ಎಂದ ಸಿಎಂ, ಇತ್ತೀಚಿಗಷ್ಟೇ ರಾಜ್ಯ ಹಿಂದೂಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ-ಆರ್ಥಿಕ ಸಮೀಕ್ಷೆಯ ಅಂಕಿ ಅಂಶಗಳಿಗಾಗಿ ತಾವು ಕಾಯುತ್ತಿದ್ದು, ವರದಿ ಬಂದ ನಂತರ ಖಾಸಗಿ ವಲಯದಲ್ಲಿ ಮೀಸಲಾತಿ ಕಲ್ಪಿಸುವ ಬಗ್ಗೆ ಚಿಂತಿಸಲಾಗುವುದು ಎಂದರು. 
ಈ ಹಿಂದೆಯೇ ಹಿಂದೂಳಿದ ವರ್ಗಗಳ ರಾಷ್ಟ್ರೀಯ ಆಯೋಗ ಖಾಸಗಿ ವಲಯದಲ್ಲಿ ಶೇ.27ರಷ್ಟು ಮೀಸಲಾತಿಗೆ ಶಿಫಾರಸು ಮಾಡಿದೆ. ಆದರೆ ಅದು ಇದುವರೆಗೂ ಜಾರಿಯಾಗಿಲ್ಲ ಎಂದು ಸಿಎಂ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com