ಅಕ್ರಮ ಆಸ್ತಿ ಪ್ರಕರಣ: ಬಿಎಸ್ ವೈ, ಈಶ್ವರಪ್ಪ ವಿರುದ್ಧದ ಅರ್ಜಿ ವಜಾ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನ...
ಬಿಎಸ್ ಯಡಿಯೂರಪ್ಪ - ಕೆ.ಎಸ್ ಈಶ್ವರಪ್ಪ
ಬಿಎಸ್ ಯಡಿಯೂರಪ್ಪ - ಕೆ.ಎಸ್ ಈಶ್ವರಪ್ಪ
Updated on: 
ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಲೋಕಾಯುಕ್ತ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 
ವಕೀಲ ವಿನೋದ್ ಅವರು ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ವಿರುದ್ಧ ಸಲ್ಲಿಸಿದ್ದ ದೂರನ್ನು ಶಿವಮೊಗ್ಗ ಲೋಕಾಯುಕ್ತ ಕೋರ್ಟ್ ಇಂದು ವಜಾಗೊಳಿಸಿದೆ.
ಹುಣಸೇಕಟ್ಟಿ ಜಂಕ್ಷನ್‌ನಲ್ಲಿ 67 ಎಕರೆ ಅರಣ್ಯ ಪ್ರದೇಶ ಒತ್ತುವರಿ, ಬಿಎಸ್‌ವೈ ಪುತ್ರಿ ಅರುಣಾದೇವಿ ಅವರು ಪತ್ರಕರ್ತರ ಹೆಸರಿನಲ್ಲಿ 4 ನಿವೇಶನ ಖರೀದಿಸಿದ ಆರೋಪ ಹಾಗೂ ಕೋಟೆಗಂಗೂರಿನ ಧವಳಗಿರಿ ಪ್ರಾಪರ್ಟಿಸ್ ಹೆಸರಿನಲ್ಲಿ ಅಕ್ರಮವಾಗಿ ಭೂಮಿ ಖರೀದಿಸಲಾಗಿದೆ ಎಂದು ವಕೀಲ ವಿನೋದ್ ಆರೋಪಿಸಿದ್ದರು. 
ಇನ್ನೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು 40 ಕೋಟಿಗೂ ಅಧಿಕ ಮೌಲ್ಯದ ಆಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದೆ.
ಬಿಜೆಪಿ ನಾಯಕರ ವಿರುದ್ಧದ ಆರೋಪಗಳಿಗೆ ವಿನೋದ್ ಅವರು ಸೂಕ್ತ ದಾಖಲೆ ಸಲ್ಲಿಸದ ಹಿನ್ನೆಲೆಯಲ್ಲಿ ಲೋಕಾಯುಕ್ತ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com