ನೋಟ್ ನಿಷೇಧದ ನಂತರ ಇಂದು ಎರಡನೇ ಬಾರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ನೋಟ್ ನಿಷೇಧದ ನಂತರ ನನಗೆ ನೂರಾರು ಪತ್ರಗಳು ಬಂದಿವೆ. ಕೇಂದ್ರ ಸರ್ಕಾರದ ಕ್ರಮದ ಬಗ್ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ತಮ್ಮ ನೋವುಗಳನ್ನು ಹೇಳಿಕೊಂಡಿದ್ದಾರೆ ಮತ್ತು ಭ್ರಷ್ಟಾಚಾರ, ಕಪ್ಪುಹಣ ಹಾಗೂ ನಕಲಿ ನೋಟ್ ವಿರುದ್ಧದ ನಿಮ್ಮ ಹೋರಾಟದಿಂದ ಹಿಂದೆ ಸರಿಯಬೇಡಿ ಎಂದು ಮನವಿ ಮಾಡಿದ್ದಾರೆ ಎಂದರು,