ತಾಂಜೇನಿಯಾ ವಿದ್ಯಾರ್ಥಿನಿಗೆ ಥಳಿತ ಪ್ರಕರಣ: ವರದಿ ಕೇಳಿದ ಕೇಂದ್ರ ಗೃಹ ಇಲಾಖೆ

ತಾಂಜೇನಿಯಾದ ವಿದ್ಯಾರ್ಥಿನಿಯೊಬ್ಬಳಿಗೆ ಥಳಿಸಿ, ಆಕೆಯ ಬಟ್ಟೆ ಹರಿದು, ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ...
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
ನವದೆಹಲಿ: ತಾಂಜೇನಿಯಾದ ವಿದ್ಯಾರ್ಥಿನಿಯೊಬ್ಬಳಿಗೆ ಥಳಿಸಿ, ಆಕೆಯ ಬಟ್ಟೆ ಹರಿದು, ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿ ನೀಡುವಂತೆ ಕೇಂದ್ರ ಗೃಹ ಇಲಾಖೆ ಗುರುವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ನಗರದ ಹೊರವಲಯದ ಹೆಸರಗಟ್ಟ ರಸ್ತೆಯಲ್ಲಿ ತಾಂಜಾನಿಯ ಮೂಲದ ಯುವತಿಯೊಬ್ಬಳನ್ನು ವಿವಸ್ತ್ರಗೊಳಿಸಿ, ಥಳಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದ್ದು, ಇದೀಗ ಈ ಘಟನೆ ರಾಜ್ಯ ಮಾತ್ರವಲ್ಲದೆ ದೇಶದ ಗಮನ ಸೆಳೆಯುತ್ತಿದೆ. 
ಕಳೆದ ಜನವರಿ 31ರಂದು ಮದ್ಯ ಸೇವಿಸಿದ್ದ ಸೂಡಾನ್‌ ವಿದ್ಯಾರ್ಥಿ ಮೊಹಮದ್‌ ಅಹದ್‌ (21) ಎಂಬಾತ ಮನಬಂದಂತೆ ಕಾರು ಚಾಲನೆ ಮಾಡಿಕೊಂಡು ಬಂದು ಹೆಸರುಘಟ್ಟ ಮುಖ್ಯರಸ್ತೆಯ ಗಣಪತಿ ನಗರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಗಣಪತಿ ನಗರದ ಶಬಾನಾ ತಾಜ್‌ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಲ್ಲದೆ ಅವರ ಪತಿ ಸನಾವುಲ್ಲಾ ಗಾಯಗೊಂಡಿದ್ದರು.
ಈ ಅಪಘಾತದಿಂದ ಕೆರಳಿದ ಸ್ಥಳೀಯರು, ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿಸಿ ಆತನ ಕಾರಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಗಲಾಟೆ ವಿಚಾರ ತಿಳಿದು ತಕ್ಷಣವೇ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com