ತಾಂಜೇನಿಯಾ ಯುವತಿ ಥಳಿತ ಪ್ರಕರಣ: ಎಸಿಪಿ ಅಶ್ವತನಾರಾಯಣ ಅಮಾನತು

ತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿಯರನ್ನು ಮೆಚ್ಚಿಸಲು ಮುಂದಾಗಿರುವ ರಾಜ್ಯ ಸರ್ಕಾರ ಶನಿವಾರ...
ತಾಂಜೇನಿಯಾ ಯುವತಿ ಥಳಿತ ಪ್ರಕರಣದ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆಗೆ ಒತ್ತಾಯಿಸಿ ಆಫ್ರಿಕನ್ ವಿದ್ಯಾರ್ಥಿಗಳು ಬೆಂಗಳೂರಿನ ಟೌನ್ ಹಾಲ್ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.
ತಾಂಜೇನಿಯಾ ಯುವತಿ ಥಳಿತ ಪ್ರಕರಣದ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆಗೆ ಒತ್ತಾಯಿಸಿ ಆಫ್ರಿಕನ್ ವಿದ್ಯಾರ್ಥಿಗಳು ಬೆಂಗಳೂರಿನ ಟೌನ್ ಹಾಲ್ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.
ಬೆಂಗಳೂರು: ತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿಯರನ್ನು ಮೆಚ್ಚಿಸಲು ಮುಂದಾಗಿರುವ ರಾಜ್ಯ ಸರ್ಕಾರ ಶನಿವಾರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಿದೆ.
ಪ್ರಕರಣದ ತನಿಖೆಯನ್ನು ಪರಿಣಾಮಕಾರಿಯಾಗಿ ನಡೆಸುತ್ತಿಲ್ಲ ಎಂಬ ಆರೋಪದ ಮೇಲೆ ಯಶವಂತಪುರ ಹೆಚ್ಚುವರಿ ಪೊಲೀಸ್ ಆಯುಕ್ತ(ಎಸಿಪಿ) ಅಶ್ವತನಾರಾಯಣ ಪಿ . ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಆದೇಶ ಹೊರಡಿಸಿದ್ದಾರೆ.
ನಿನ್ನೆಯಷ್ಟೇ ಪ್ರಕರಣ ಸಂಬಂಧ ಓರ್ವ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು. ಪೊಲೀಸ್ ಇನ್ಸ್ ಪೆಕ್ಟರ್ ಪ್ರವೀಣ್ ಬಾಬು ಹಾಗೂ ಪೇದೆಗಳಾದ ಮಂಜುನಾಥ್ ಮತ್ತು ರಾಜಶೇಖರ್ ಅವರನ್ನು ಅಮಾನತುಗೊಳಿಸಲಾಗಿದೆ.
ತಾಂಜೇನಿಯ ವಿದ್ಯಾರ್ಥಿ ಎಣೆದ ಕಟ್ಟು ಕಥೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿರುವುದು ಇದೀಗ ಪೊಲೀಸ್ ಇಲಾಖೆಯಲ್ಲಿ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲೂ ತೀವ್ರ ವಿರೋಧ ವ್ಯಕ್ತವಾಗಿದೆ.
ತನಿಖೆ ತೀವ್ರ: ತಾಂಜೇನಿಯಾ ವಿದ್ಯಾರ್ಥಿಯು ಮೇಲೆ ನಡೆದಿರುವ ಹಲ್ಲೆ ಪ್ರಕರಣ ತನಿಖೆ ನಡೆಸುತ್ತಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಚರಣ್‌ರೆಡ್ಡಿ ಅವರು ಅಧಿಕಾರಿಗಳೊಂದಿಗೆ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಪರಾಮರ್ಶೆ ನಡೆಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳು ಸಂತ್ರಸ್ಥ ಯುವತಿ ಆಕೆಯ ಸ್ನೇಹಿತರು ಅಪಘಾತ ನಡೆಸಿದ ತಾಂಜೇನಿಯಾ ಯುವಕನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಲಾಗಿದ್ದು ಅದಷ್ಟು ಬೇಗ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಚರಣ್ ರೆಡ್ಡಿ ತಿಳಿಸಿದ್ದಾರೆ.
ಕಳೆದ ಭಾನುವಾರ ಮದ್ಯ ಸೇವಿಸಿದ್ದ ಸೂಡಾನ್‌ ವಿದ್ಯಾರ್ಥಿ ಮೊಹಮದ್‌ ಅಹದ್‌ (21) ಎಂಬಾತ ಮನಬಂದಂತೆ ಕಾರು ಚಾಲನೆ ಮಾಡಿಕೊಂಡು ಬಂದು ಹೆಸರುಘಟ್ಟ ಮುಖ್ಯರಸ್ತೆಯ ಗಣಪತಿ ನಗರದಲ್ಲಿ ಸನಾವುಲ್ಲಾ ಅವರ ಬೈಕ್‌ಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಅವರ ಪತ್ನಿ ಶಬಾನಾ ತಾಜ್‌ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡ ಸ್ಥಳದಲ್ಲಿದ್ದ ಜನ ಕಾರಿನಲ್ಲಿದ್ದ ತಾಂಜೇನಿಯಾದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ಕಾರಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಸಂಬಂಧ ಇದುವರೆಗೆ 9 ಮಂದಿಯನ್ನು ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com