ಚಿರತೆ ಸೆರೆ(ಸಾಂದರ್ಭಿಕ ಚಿತ್ರ)
ಪ್ರಧಾನ ಸುದ್ದಿ
ವಿಬ್'ಗಯಾರ್ ಶಾಲೆಗೆ ನುಗ್ಗಿದ್ದ ಚಿರತೆ ಸೆರೆ ಹಿಡಿದ ಅರಣ್ಯ ಸಿಬ್ಬಂದಿ
ನಗರದ ವರ್ತೂರಿನಲ್ಲಿರುವ ವಿಬ್'ಗಯಾರ್ ಶಾಲೆಗೆ ನುಗ್ಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ...
ಬೆಂಗಳೂರು: ನಗರದ ವರ್ತೂರಿನಲ್ಲಿರುವ ವಿಬ್'ಗಯಾರ್ ಶಾಲೆಗೆ ನುಗ್ಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ವಿಬ್ ಗಯಾರ್ ಶಾಲೆಗೆ ಚಿರತೆ ನುಗ್ಗಿರುವ ಸುದ್ದಿಯನ್ನು ಅರಣ್ಯ ಇಲಾಖಾ ಪೊಲೀಸರಿಗೆ ಶಾಲೆಯ ಭದ್ರತಾ ಸಿಬ್ಬಂದಿ ಮುಟ್ಟಿಸಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ 50 ಮಂದಿ ಅರಣ್ಯ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ಕೈಗೊಂಡಿದ್ದರು. ನಿರಂತರವಾಗಿ 10 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆಯನ್ನು ಸೆರೆ ಹಿಡಿದಿದ್ದಾರೆ.
ಅರಣ್ಯ ಇಲಾಖೆ ವೈದ್ಯರು ಚಿರತೆಗೆ ಅರವಳಿಕೆ ಚುಚ್ಚು ಮದ್ದು ನೀಡಿದರು. ಈ ವೇಳೆ ಚಿರತೆ ತಪ್ಪಿಸಿಕೊಂಡು ಹೋಗಿ ಶಾಲೆಯ ಶೌಚಾಲಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಬಲೆಯ ಮೂಲಕ ಚಿರತೆಯನ್ನು ಸೆರೆ ಹಿಡಿದಿದ್ದಾರೆ.
ಈ ವೇಳೆ ಚಿರತೆ ದಾಳಿಗೆ ನಾಲ್ಕು ಮಂದಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ