ಯೋಧನ ಪಾರ್ಥಿವ ಶರೀರವನ್ನು ಇಂದು ರಾತ್ರಿ ಕಿಮ್ಸ್ ಶವಗಾರದಲ್ಲಿಡುವ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7ಗಂಟೆಯಿಂದ 10 ಗಂಟೆಯವರೆಗೆ ನೆಹರು ಸ್ಟೇಡಿಯಂನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಿಡಲಾಗುವುದು. ನಂತರ ಸ್ವಗ್ರಾಮ ಬೆಟದೂರಿಗೆ ತೆಗೆದುಕೊಂಡು ಹೋಗಿ, 2 ಗಂಟೆ ಸುಮಾರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ವಿನಯ್ ಕುಲಕರ್ಣಿ ಅವರು ತಿಳಿಸಿದ್ದಾರೆ.