ವೀರಯೋಧ ಹನುಮಂತಪ್ಪ ಅಂತಿಮ ದರ್ಶನ ಪಡೆದ ಸಾರ್ವಜನಿಕರು

ಹುತಾತ್ಮ ವೀರಯೋಧ ಲ್ಯಾನ್ಸ್‌ ನಾಯಕ್‌ ಹನುಮಂತಪ್ಪ ಕೊಪ್ಪದ್ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ರಾಜಕೀಯ ಮುಖಂಡರು, ವಿವಿಧ ಮಠಾಧೀಶರು...
ಲ್ಯಾನ್ಸ್ ನಾಯ್ಕ್ ಹನುಮಂತಪ್ಪ
ಲ್ಯಾನ್ಸ್ ನಾಯ್ಕ್ ಹನುಮಂತಪ್ಪ

ಬೆಂಗಳೂರು: ಹುತಾತ್ಮ ವೀರಯೋಧ ಲ್ಯಾನ್ಸ್‌ ನಾಯಕ್‌ ಹನುಮಂತಪ್ಪ ಕೊಪ್ಪದ್ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ರಾಜಕೀಯ ಮುಖಂಡರು, ವಿವಿಧ ಮಠಾಧೀಶರು, ಕಲಾವಿದರು ಸಾರ್ವಜನಿಕರು ಪಡೆದಿದ್ದಾರೆ.

ಸಾರ್ವಜನಿಕರಿಗಾಗಿ ಹುಬ್ಬಳ್ಳಿಯ ನೆಹರು ಸ್ಟೇಡಿಯಂನಲ್ಲಿ ಬೆಳಗ್ಗೆ 10 ಗಂಟೆಯವರೆಗೂ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ನೆಹರು ಸ್ಟೇಡಿಯಂ ಸುತ್ತ ಸಾವಿರಾರು ಜನರು ನೆರೆದಿದ್ದು, ಹನುಮಂತಪ್ಪ ಕೊಪ್ಪದ್ ಅವರ ಅಂತಿಮ ದರ್ಶನ ಪಡೆದರು. ಭದ್ರತೆಗಾಗಿ 1 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ಇನ್ನು ಹನುಮಂತಪ್ಪನವರ ಹುಟ್ಟುರಾದ ಬೆಟದೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರಿಗಾಗಿ ಬೆಟದೂರಿನ ಸರ್ಕಾರಿ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್‌ ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿ, ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದ ಧಾರವಾಡ ಜಿಲ್ಲೆಯ ಕುಂದಗೊಳ ತಾಲೂಕಿನ ಬೆಟದೂರಿನ ಯೋಧ ಹನುಮಂತಪ್ಪ ಕೊಪ್ಪದ್ ಅವರು ಇಂದು ಆರ್ ಆರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com