ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಮತದಾನ ಆರಂಭ

ರಾಜ್ಯದ 15 ಜಿಲ್ಲೆಗಳ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ...
ಮತದಾನ ಆರಂಭ(ಸಾಂದರ್ಭಿಕ ಚಿತ್ರ)
ಮತದಾನ ಆರಂಭ(ಸಾಂದರ್ಭಿಕ ಚಿತ್ರ)

ಬೆಂಗಳೂರು: ರಾಜ್ಯದ 15 ಜಿಲ್ಲೆಗಳ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ಮತದಾನ ಆರಂಭಗೊಂಡಿದೆ.

ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭಗೊಂಡಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

ಬೆಂಗಳೂರಿನ ಹೆಬ್ಬಾಳ, ರಾಯಚೂರು ಜಿಲ್ಲೆಯ ದೇವದುರ್ಗ ಹಾಗೂ ಬೀದರ್ ವಿಧಾನಸಭಾ ಮತಕ್ಷೇತ್ರ ಗಳಿಗೆ ಉಪ ಚುನಾವಣೆಯ ಜತೆಗೆ ಬೆಂ. ನಗರ, ಬೆಂ.ಗ್ರಾಮಾಂತರ, ರಾಮನಗರದ ತಾಪಂ, ಜಿಪಂ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಈ ಜಿಲ್ಲೆಗಳ ಒಟ್ಟು 552 ಜಿಪಂ ಕ್ಷೇತ್ರಗಳ ಪೈಕಿ 550 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ 547 ಸ್ಥಾನಗಳಿಗೆ, ಬಿಜೆಪಿ 538 ಸ್ಥಾನಗಳಿಗೆ ಹಾಗೂ ಜೆಡಿಎಸ್ 361 ಸ್ಥಾನಗಳಿಗೆ ಸ್ಪರ್ಧಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com