15 ಜಿಲ್ಲೆಗಳಲ್ಲಿ 2ನೇ ಹಂತದ ಪಂಚಾಯತ್ ಚುನಾವಣೆ‌: ಮತದಾನ ಆರಂಭ, ಮಾರಾಮಾರಿ

15 ಜಿಲ್ಲೆಗಳಲ್ಲಿ ಎರಡನೇ ಹಂತದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಮತದಾನ ಆರಂಭವಾಗಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಿತ್ತೂರು...
ಮತದಾನ(ಸಂಗ್ರಹ ಚಿತ್ರ)
ಮತದಾನ(ಸಂಗ್ರಹ ಚಿತ್ರ)

ಬೆಂಗಳೂರು: 15 ಜಿಲ್ಲೆಗಳಲ್ಲಿ ಎರಡನೇ ಹಂತದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಮತದಾನ ಆರಂಭವಾಗಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಿತ್ತೂರು ಗ್ರಾಮದಲ್ಲಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಮತದಾರರು ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಕೆಲವೆಡೆ ಘರ್ಷಣೆಗಳು ಸಂಭವಿಸಿವೆ ಎಂದು ಮೂಲಗಳು ತಿಳಿಸಿವೆ. ಬೀದರ್ ಜಿಲ್ಲೆಯ 5 ಕಡೆಗಳಲ್ಲಿ ಮತದಾನಕ್ಕೆ ಬಹಿಷ್ಕಾರ ಹಾಕಿದ ಘಟನೆ ನಡೆದಿದೆ.

ಹದಿನೈದು ಜಿಲ್ಲಾ ಪಂಚಾಯಿತಿಯ 530 ಕ್ಷೇತ್ರಗಳು ಹಾಗೂ 80 ತಾಲೂಕು ಪಂಚಾಯಿತಿಯ 1936 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 8616 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಎಲ್ಲೆಲ್ಲಿ ಮತದಾನ:
ಮಂಡ್ಯ, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ಬಳ್ಳಾರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬೀದರ್‌, ಯಾದಗಿರಿ, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಸೇರಿ 15 ಜಿಲ್ಲೆಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com